Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ದೇವರ ಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ತಾನಾಗಲಿ ತನ್ನ ಸಂಗಡ ಇದ್ದವರಾಗಲಿ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ತಿಂದನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ತಾನಾಗಲಿ ತನ್ನ ಸಂಗಡಿಗರಾಗಲಿ, ತಿನ್ನುವುದಕ್ಕೆ ಧರ್ಮಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತಿನ್ನಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ದೆವಾಚ್ಯಾ ಗುಡಿತ್ ಗೆಲೊ. ಅನಿ ದೆವಾಕ್ ಭೆಟ್ವಲ್ಲ್ಯಾ ಭಾಕ್ರಿಯಾ ಯಾಜಕಾನಿ ಸೊಡುನ್ ಅನಿ ಕೊನ್‍ಬಿ ಖಾತಲೆ ನಾ ಮನುನ್ ಮೊಯ್ಜೆಚ್ಯಾ ಖಾಯ್ದ್ಯಾತ್ನಿ ಸಾಂಗಲ್ಲೆ ಹಾಯ್ ಜಾಲ್ಯಾರ್‍ಬಿ ತೆನಿ ಅನಿ ತೆಚ್ಯಾ ವಾಂಗ್ಡಿಯಾನಿ ತ್ಯಾ ಭಾಕ್ರಿಯಾ ಖಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:4
11 ತಿಳಿವುಗಳ ಹೋಲಿಕೆ  

ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.


ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ.


ಯಾಜಕನು ದಾವೀದನಿಗೆ, “ನನ್ನ ಬಳಿಯಲ್ಲಿ ಮೀಸಲು ರೊಟ್ಟಿಗಳು ಹೊರತು ಬೇರೆ ರೊಟ್ಟಿಗಳಿಲ್ಲ. ನಿನ್ನ ಆಳುಗಳು ಸ್ತ್ರೀಸಂಗ ಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು” ಎಂದನು.


ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನಗಳಲ್ಲಿ ಯೆಹೋವನ ಸನ್ನಿಧಿಯಿಂದ ತೆಗೆಯಲ್ಪಟ್ಟ ನೈವೇದ್ಯವಾದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳು ಇರಲಿಲ್ಲವಾದ್ದರಿಂದ, ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.


ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?


ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?


ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ,


ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ,


ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು