ಮತ್ತಾಯ 12:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ದಕ್ಷಿಣದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 “ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಝಡ್ತಿಚ್ಯಾ ದಿಸಿ “ಶೆಬಾ ಮನ್ತಲ್ಯಾ ದೆಸಾಚಿ ರಾನಿ ಇಬೆ ರ್‍ಹಾವ್ನ್, ಹಿ ಪಿಳ್ಗಿ ಚುಕಿದಾರ್ ಮನುನ್ ದಾಕ್ವುನ್ ದಿತಾ, ಕಶ್ಯಾಕ್ ಮಟ್ಲ್ಯಾರ್, ಅಪ್ನಾಚ್ಯಾ ದೆಸಾಕ್ನಾ ಸಗ್ಳಿ ವಾಟ್‍ಬರ್ ಚಲುನ್ಗೆತ್ ತಿ ಸಾಲ್ಮಾವಾಚ್ಯಾ ಶಾನ್‍ಪಾನಾಚೆ ಶಿಕಾಪ್ ಆಯ್ಕುಕ್ ಮನುನ್ ಯೆಲ್ಲಿ, ಖರೆ ಮಿಯಾ ಖರೆಚ್ ಸಾಂಗ್ತಾ, ಹಿತ್ತೆ ಸೊಲೊಮೊನಾಚ್ಯಾನ್ಕಿ ಮೊಟೊ ಎಕ್ಲೊ ಹಾಯ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |