Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರವಾದಿ ಯೆಶಾಯನ ಈ ಪ್ರವಚನ ಅವರಲ್ಲಿ ಈಡೇರುತ್ತದೆ. ‘ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ; ಅದೇನಂದರೆ - ನೀವು ಕಿವಿಯಿದ್ದು ಕೇಳಿದರೂ ತಿಳುಕೊಳ್ಳುವದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಂಥವರ ಬಗ್ಗೆ ಯೆಶಾಯನು ಹೇಳಿದ್ದೇನೆಂದರೆ: ‘ನೀವು ಆಲಿಸುತ್ತೀರಿ, ಕೇಳುತ್ತೀರಿ, ಆದರೆ ನಿಮಗೆ ಅರ್ಥವಾಗುವುದಿಲ್ಲ. ನೀವು ದೃಷ್ಟಿಸಿ ನೋಡುತ್ತೀರಿ, ಆದರೆ ನಿಮಗೆ ಕಾಣುವುದನ್ನು ಅರ್ಥಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನೆಂದರೆ, “ ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 “ತೆಚೆಸಾಟ್ನಿ ದೆವಾನ್ ಇಸಾಯಿಯಾ ಪ್ರವಾದ್ಯಾಚ್ಯಾ ಮುಕಾಂತ್ರ್ ಸಾಂಗಲ್ಲೆ ಪುರಾ ಹೊತಾ, ಹಿ ಲೊಕಾ ಆಯಿಕ್ತ್ಯಾತ್ ಅನಿ ಆಯಿಕ್ತ್ಯಾತ್, ಖರೆ ತೆಂಕಾ ಕನ್ನಾಚ್ ಕಳಿನಾ; ತೆನಿ ಬಗ್- ಬಗ್ತ್ಯಾತ್ ಖರೆ, ತೆಂಕಾ ದಿಸಿನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:14
11 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ದ್ರೋಹಿ ವಂಶದ ಮಧ್ಯದಲ್ಲಿ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.


ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.


“ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.


ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,


ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು