Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿ ಬೀಳುತ್ತಾನೆ; ಇವನೇ ಬೀಜ ಬಿದ್ದ ಬಂಡೆಯ ನೆಲವಾಗಿರುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆ ತ್ಯಾ ಗೊಸ್ಟಿಯಾ ತೆಂಚ್ಯಾ ಮನಾತ್ ಎಗ್ದಮ್ ಭುತ್ತುರ್ ಗೆಲ್ಲ್ಯಾ ರ್‍ಹಾಯ್ನಾ, ಅಶೆ ತೆನಿ ಲೈ ಎಳ್ ದೆವಾಚ್ಯಾ ಗೊಸ್ಟಿ ಸರ್ಕೆ ಚಲಿನ್ಯಾತ್. ದೆವಾಚ್ಯಾ ಬರ್‍ಯಾ ಖಬ್ರೆಸಾಟ್ನಿ ಕಸ್ಟ್ ನಾ ತರ್ ತರಾಸ್ ತೆಂಕಾ ಯೆಲೊ ತರ್, ಎಗ್ದಮ್ ತೆನಿ ತೆ ಸೊಡುನ್ ಸೊಡ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:21
47 ತಿಳಿವುಗಳ ಹೋಲಿಕೆ  

ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.


ಯಾರೂ ದುಷ್ಟತನದಿಂದ ಸ್ಥಿರನಾಗನು, ಶಿಷ್ಟನು ಯಾವಾಗಲೂ ದೃಢಮೂಲನೇ.


ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ,


ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.


ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.


ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.


ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.


ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.


ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.


ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.


ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.


ಆಗ ಯೇಸು, ಅವರಿಗೆ, “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”


ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.


ಆದರೆ ಯೇಸುವು ಅವರಿಗೆ “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ” ಅಂದನು.


ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.


ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.


ಕೆಡುಕರ ಕೊಳ್ಳೆಯು ದುಷ್ಟರಿಗೆ ಇಷ್ಟ, ಆದರೆ ಶಿಷ್ಟರ ಬುಡ ಫಲದಾಯಕ.


ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.


ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.


ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು