Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡು ಕಟ್ಟಿ ವಾಸಿಸುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ, ಬೆಳೆದ ಮೇಲೆ ಕಾಯಿಪಲ್ಯದ ಗಿಡಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ; ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣ ಬೀಜವಾಗಿದೆ. ಆದರೆ ಅದು ಬೆಳೆದಾಗ ತೋಟದ ಗಿಡಗಳಿಗಿಂತಲೂ ದೊಡ್ಡದಾಗಿರುವುದು. ಅದು ಮರವಾದಾಗ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಮಾಡಿಕೊಳ್ಳುವಷ್ಟು ದೊಡ್ಡದಾಗಿರುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದ್ದರೂ ಅದು ಬೆಳೆದಾಗ, ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು, ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಹೆ ಭ್ಹಿಂಯ್ ಸಗ್ಳಾಂಚ್ಯಾನ್ಕಿ ಬಾರಿಕ್ ಖರೆ ತೆ ಮೊಟೆ ಹೊಲ್ಲ್ಯಾ ತನ್ನಾ ಸಗ್ಳ್ಯಾ ಝಾಡಾಂಚ್ಯಾನ್ಕಿ ಮೊಟೆ ಝಾಡ್ ಹೊತಾ. ತಸೆಮನುನ್ ಮಳ್ಬಾ ವೈಲಿ ಫಾಂಕ್ರಾ ಯೆತ್ಯಾತ್ ಅನಿ ತೆಚ್ಯಾ ಟಾಳಿಯಾಕ್ನಿ ಘಂಟೆ ಭಾಂದ್ತ್ಯಾತ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:32
20 ತಿಳಿವುಗಳ ಹೋಲಿಕೆ  

ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಸಮಸ್ತ ಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳಿಗೆ ಜನ್ಮ ಕೊಟ್ಟವು. ಮಹಾಜನಾಂಗಗಳೆಲ್ಲಾ ಅದರ ನೆರಳಿನಲ್ಲಿ ವಾಸಮಾಡಿದವು.


ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.


ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.


ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?


ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?


ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ” ಅಂದನು.


ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು