Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತಕ್ಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜೆಜುನ್ ತೆಂಕಾ, ಅನಿಎಕ್ ಕಾನಿ ಸಾಂಗಟ್ಲ್ಯಾನ್: “ಸರ್ಗಾಚೊ ರಾಜ್ ಮಟ್ಲ್ಯಾರ್, ಎಕ್ ಬಾಯ್ಕೊಮನುಸ್ ಸೊಡಾ ಘೆತಾ ಅನಿ ತಿನ್ ಶೆರ್ ಪಿಟ್ಟಾತ್ ಘಾಲುನ್ ಥವ್ತಾ ಅನಿ ತೆ ಪಿಟ್ಟ್ ಸಗ್ಳೆ ಫುಗ್ತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:33
19 ತಿಳಿವುಗಳ ಹೋಲಿಕೆ  

ಸ್ವಲ್ಪ ಹುಳಿಯಿಂದ ಕಣಕವೆಲ್ಲಾ ಹುಳಿಯಾಗುವುದು.


ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು.


ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.


ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.


ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.


ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವ್ವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.


ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು.


ಅಮ್ನೋನನು ಅಸ್ವಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣ ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು