ಮತ್ತಾಯ 13:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 “ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 “ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ದ್ರವ್ಯಕ್ಕೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಬಿಟ್ಟು ಅದರಿಂದಾದ ಸಂತೋಷದಿಂದ ತನ್ನ ಬದುಕನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 “ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 “ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 “ಸರ್ಗಾಚೊ ರಾಜ್ ಮಟ್ಲ್ಯಾರ್ ಅಶೆ, ಎಕ್ ಮಾನ್ಸಾಕ್ ಎಕ್ ಶೆತಾತ್ ಬದಿಕ್ ಗಾವ್ತಾ, ತೊ ತೆ ಅನಿ ಪರ್ತುನ್ ಧಾಪುನ್ ಥವ್ತಾ, ತೆಚೆಸಾಟ್ನಿ ತೊ ಲೈ ಕುಶಿ ಹೊತಾ ಅನಿ ಜಾವ್ನ್ ಅಪ್ನಾಚೆ ಹೊತ್ತೆ ಸಗ್ಳೆ ಇಕ್ತಾ ಅನಿ ಯೆವ್ನ್ ತೆ ಶೆತ್ ತೊ ಇಕಾತ್ ಘೆತಾ”. ಅಧ್ಯಾಯವನ್ನು ನೋಡಿ |