Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 “ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 “ಇದೆಲ್ಲ ನಿಮಗೆ ಅರ್ಥವಾಯಿತೇ?” ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು “ಅರ್ಥವಾಯಿತು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಈ ಎಲ್ಲಾ ಮಾತುಗಳ ಅರ್ಥವು ನಿಮಗೆ ತಿಳಿಯಿತೋ ಎಂದು ಕೇಳಲು ಅವರು - ತಿಳಿಯಿತು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಯೇಸು ತನ್ನ ಶಿಷ್ಯರಿಗೆ, “ನೀವು ಈ ವಿಷಯಗಳನ್ನೆಲ್ಲಾ ಅರ್ಥಮಾಡಿಕೊಂಡಿರೋ?” ಎಂದು ಕೇಳಿದನು. ಅದಕ್ಕೆ ಶಿಷ್ಯರು, “ನಾವು ಅರ್ಥಮಾಡಿಕೊಂಡೆವು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಯೇಸು ಶಿಷ್ಯರಿಗೆ, “ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ?” ಎಂದು ಕೇಳಿದರು. ಅದಕ್ಕೆ, ಅವರು ಯೇಸುವಿಗೆ, “ಹೌದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ತನ್ನಾ ಜೆಜುನ್ ಶಿಸಾಕ್ನಿ, ಹೆ ಸಗ್ಳೆ ತುಮ್ಕಾ ಕಳ್ಳೆ ಕಾಯ್? ಮನುನ್ ಇಚಾರ್‍ಲ್ಯಾನ್. ತನ್ನಾ ಶಿಸಾನಿ “ಹೊಯ್,” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:51
13 ತಿಳಿವುಗಳ ಹೋಲಿಕೆ  

ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು.


ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.


ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಆತನು ಅವರಿಗೆ, “ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,


“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)


ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.


ಬಾಯೊಳಕ್ಕೆ ಹೋಗುವಂಥದ್ದು ಹೊಟ್ಟೆಯಲ್ಲಿ ಸೇರಿ ವಿಸರ್ಜಿತವಾಗುತ್ತದೆಂದು ನಿಮಗೆ ತಿಳಿಯಲಿಲ್ಲವೋ?


ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.


ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು