Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:57 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಆದರೆ ಯೇಸುವು ಅವರಿಗೆ “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 ಅವರಿಗೆ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಆದರೆ ಯೇಸು ಅವರಿಗೆ - ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಮಾತ್ರ ಮರ್ಯಾದೆಯಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ. ಯೇಸು ಅವರಿಗೆ, “ಪ್ರವಾದಿಗೆ ಪರಜನರು ಮರ್ಯಾದೆ ಸಲ್ಲಿಸುತ್ತಾರೆ; ಆದರೆ ಸ್ವಂತ ಊರಿನವರಾಗಲಿ ಸ್ವಂತ ಮನೆಯವರಾಗಲಿ ಮರ್ಯಾದೆ ಕೊಡುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಅವರು ಯೇಸುವನ್ನು ತಾತ್ಸಾರ ಮಾಡಿದರು. ಆದರೆ ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

57 ಅಶೆ ತ್ಯಾ ಲೊಕಾ ಜೆಜುಕ್ ಕಿಮ್ಮತ್ ದಿವ್ಕನ್ಯಾತ್. ತನ್ನಾ ಜೆಜುನ್ ತೆಂಕಾ, “ಅಪ್ನಾಚೆ ಗಾಂವ್ ಅನಿ ಅಪ್ನಾಚ್ಯಾ ಘರ್‍ಚ್ಯಾ ಲೊಕಾತ್ನಿ ಸೊಡುನ್ ಎಕ್ ಪ್ರವಾದಿ ಖೈಬಿ ಜಾಂವ್ದಿತ್, ಸಗ್ಳ್ಯಾಕ್ಡೆ ತೆಕಾ ತೆಚಿ ಮರ್‍ಯಾದ್ ಗಾವ್ತಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:57
19 ತಿಳಿವುಗಳ ಹೋಲಿಕೆ  

ಏಕೆಂದರೆ ಪ್ರವಾದಿಗೆ ಸ್ವಂತದೇಶದಲ್ಲಿ ಗೌರವವಿಲ್ಲವೆಂದು ಯೇಸು ತಾನೇ ಹೇಳಿದ್ದನು.


ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು.


ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ?


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


“ಈತನು ಯೋಸೇಫನ ಮಗನಾದ ಯೇಸು ಅಲ್ಲವೇ? ಈತನ ತಂದೆ ತಾಯಿಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಇಳಿದು ಬಂದೆನು’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.


ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು” ಎಂದು ಹೇಳಿದನು.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”


ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು.


ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.


ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.


ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ.


ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.


ಯೇಸು ಅವರಿಗೆ, “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು