Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೆರೋದನು ತನ್ನ ಸಹೋದರ ಫಿಲಿಪ್ಪನ ಧರ್ಮಪತ್ನಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಅವಳ ಪ್ರಯುಕ್ತ ಯೊವಾನ್ನನನ್ನು ಹಿಡಿದು ಬಂಧಿಸಿ ಸೆರೆಯಲ್ಲಿ ಹಾಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೆರೋದನು ಹೆರೋದ್ಯಳ ನಿವಿುತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಯಲ್ಲಿ ಹಾಕಿಸಿದ್ದನು. ಆ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ಸಮಯಕ್ಕೆ ಮೊದಲೇ ಹೆರೋದ್ಯಳ ನಿಮಿತ್ತವಾಗಿ ಹೆರೋದನು ಯೋಹಾನನನ್ನು ಸರಪಣಿಗಳಿಂದ ಬಂಧಿಸಿ, ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಹೆಂಡತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೆರೋದನು ತನ್ನ ಸಹೋದರ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ, ಯೋಹಾನನನ್ನು ಹಿಡಿಸಿ, ಕಟ್ಟಿ ಸೆರೆಯಲ್ಲಿ ಹಾಕಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅದ್ದಿ ಹೆರೊದಾನ್ ಜುವಾಂವಾಕ್ ಧರುನ್ ಹಾನುಕ್ ಹುಕುಮ್ ದಿಲ್ಲ್ಯಾನ್ ಅನಿ ತೆಕಾ ಸರ್‍ಪೊಳಿನಿ ಭಾಂದುನ್ ಬಂದಿಖಾನ್ಯಾತ್ ಘಾಟಲ್ಲ್ಯಾನ್. ತೆಚ್ಯಾ ಭಾವಾಚ್ಯಾ ಪಿಲಿಪಾಚ್ಯಾ ಬಾಯ್ಕೊಕ್ ಹೆರೊದಿಯಾಸಾಕ್ ಲಾಗುನ್ ತೆನಿ ಅಶೆ ಕರಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:3
18 ತಿಳಿವುಗಳ ಹೋಲಿಕೆ  

ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು.


ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.


ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ.


ಇದರಿಂದ ಹೆರೋದ್ಯಳು ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.


ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,


ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.


ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.


ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.


ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.


ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ


ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.


ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,


ಈತನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳಿದುಕೊಂಡು ಯೇಸುವನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿನಗಳಲ್ಲಿ ಯೆರೂಸಲೇಮಿನಲ್ಲೇ ಇದ್ದನು.


ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,


ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು