Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ದೋಣಿಯಲ್ಲಿದ್ದವರು, “ನೀವು ನಿಜವಾಗಿಯೂ ದೇವರ ಪುತ್ರ!” ಎಂದು ಹೇಳಿ ಯೇಸುವನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆಗ ದೋಣಿಯಲ್ಲಿದ್ದವರು - ನಿಜವಾಗಿ ನೀನು ದೇವಕುಮಾರನು ಎಂದು ಹೇಳಿ ಆತನಿಗೆ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ದೋಣಿಯಲ್ಲಿದ್ದ ಶಿಷ್ಯರು ಯೇಸುವನ್ನು ಆರಾಧಿಸಿ, “ನೀನು ನಿಜವಾಗಿಯೂ ದೇವರ ಮಗನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, “ನಿಜವಾಗಿಯೂ ನೀವು ದೇವಪುತ್ರ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತನ್ನಾ ಢೊನಿತ್ಲ್ಯಾ ಶಿಸಾನಿ ಜೆಜುಚೆ ಆರಾದನ್ ಕರ್‍ಲ್ಯಾನಿ, ಅನಿ “ತಿಯಾ ಖರೆಚ್ ದೆವಾಚೊ ಲೆಕ್.” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:33
27 ತಿಳಿವುಗಳ ಹೋಲಿಕೆ  

ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.


ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು.


ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.


ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.


ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.


ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.


ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.


ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.


ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಈ ಮನುಷ್ಯನು ದೇವಕುಮಾರನೇ” ಅಂದನು.


ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.


ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.


ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.


ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.


ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ,


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.


ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, “ಕರ್ತನೇ ನನಗೆ ಸಹಾಯಮಾಡು” ಅಂದಳು.


ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,


ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.


ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, “ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?” ಎಂದು ಆತನನ್ನು ಕೇಳಿದನು.


ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.


ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು