Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೀಗಿರುವಲ್ಲಿ ಹೆರೋದನ ಹುಟ್ಟುಹಬ್ಬ ಬಂದಿತು. ಹೆರೋದಿಯಳ ಮಗಳು ಆಹ್ವಾನಿತರ ಮುಂದೆ ನರ್ತನಮಾಡಿ ಹೆರೋದನನ್ನು ಮೆಚ್ಚಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೆರೋದನ ಹುಟ್ಟುಹಬ್ಬದ ದಿನದಂದು ಹೆರೋದ್ಯಳ ಮಗಳು ಹೆರೋದನ ಮತ್ತು ಅವನ ಅತಿಥಿಗಳ ಮುಂದೆ ನರ್ತಿಸಿದಳು. ಹೆರೋದನು ಅವಳನ್ನು ಬಹಳ ಮೆಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಹೆರೋದನ ಹುಟ್ಟಿದ ದಿನವನ್ನು ಆಚರಿಸುವಾಗ, ಹೆರೋದ್ಯಳ ಮಗಳು ಅವರ ಮುಂದೆ ನರ್ತನ ಮಾಡಿ ಹೆರೋದನನ್ನು ಬಹಳ ಮೆಚ್ಚಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೆರೊದಾಚ್ಯಾ ಜಲ್ಮಾಚ್ಯಾ ದಿಸಿ ಹೆರೊದಿಯಾಸಾಚ್ಯಾ ಲೆಕಿನ್ ಸಗ್ಳ್ಯಾಂಚ್ಯಾ ಇದ್ರಾಕ್ ನಾಚ್ಲಿನ್ ತಸೆಮನುನ್ ಹೆರೊದಾಕ್ ಲೈ ಕುಶಿ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:6
21 ತಿಳಿವುಗಳ ಹೋಲಿಕೆ  

ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.


ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು.


ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’


ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ ಯೋಹಾನನಿಂದ ಗದರಿಸಲ್ಪಟ್ಟಿದರಿಂದ,


ಇದರಿಂದ ಹೆರೋದ್ಯಳು ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.


ಅವನು ತನ್ನ ಎಲ್ಲಾ ಸರದಾರರಿಗೂ ಮತ್ತು ಪರಿವಾರದವರಿಗೂ ಎಸ್ತೇರಳ ಔತಣ ಎಂದು ದೊಡ್ಡ ಔತಣವನ್ನು ಮಾಡಿಸಿ, ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ, ರಾಜರ ಘನತೆಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.


ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.


ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.


ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.


ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.


ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ


ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.


ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,


ಈತನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳಿದುಕೊಂಡು ಯೇಸುವನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿನಗಳಲ್ಲಿ ಯೆರೂಸಲೇಮಿನಲ್ಲೇ ಇದ್ದನು.


ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,


ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು