ಮತ್ತಾಯ 14:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವಳು ತನ್ನ ತಾಯಿಯ ಸಲಹೆ ಪಡೆದು, “ನನಗೆ ಸ್ನಾನಿಕ ಯೊವಾನ್ನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿಕೊಡಿ,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಅವಳು ತನ್ನ ತಾಯಿಯ ಬೋಧನೆಯನ್ನು ಕೇಳಿ - ಇಲ್ಲಿಯೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡು ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಏನು ಕೇಳಿಕೊಳ್ಳಬೇಕೆಂದು ಹೆರೋದ್ಯಳು ತನ್ನ ಮಗಳಿಗೆ ಹೇಳಿಕೊಟ್ಟಳು. ಆದ್ದರಿಂದ ಅವಳು ಹೆರೋದನಿಗೆ, “ಸ್ನಾನಿಕ ಯೋಹಾನನ ತಲೆಯನ್ನು ಇಲ್ಲಿಯೇ ಈ ತಟ್ಟೆಯ ಮೇಲೆಯೇ ನನಗೆ ಕೊಡು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವಳು ತನ್ನ ತಾಯಿಯ ಸಲಹೆ ಪಡೆದು, “ಸ್ನಾನಿಕನಾದ ಯೋಹಾನನ ತಲೆಯನ್ನು ಇಲ್ಲಿಯೇ ಒಂದು ತಟ್ಟೆಯಲ್ಲಿ ನನಗೆ ತರಿಸಿಕೊಡು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತೆನಿ ಅಪ್ನಾಚ್ಯಾ ಬಾಯ್‍ಕಡೆ ಇಚಾರುನ್ ಘೆಟ್ಲಿನ್. ತನ್ನಾ ತೆನಿ ರಾಜಾಕ್ಡೆ, “ ಹಿತ್ತೆ ಅತ್ತಾಚ್ ಮಾಕಾ ಜುವಾಂವ್ ಬಾವ್ತಿಸಾಚೆ ಟಕ್ಲೆ ಎಕ್ ಆಯ್ದಾನಾತ್ನಾ ಪಾಜೆ!” ಮನುನ್ ಮಾಗಟ್ಲಿನ್. ಅಧ್ಯಾಯವನ್ನು ನೋಡಿ |