Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದನ್ನು ಕೇಳಿ ರಾಜನಿಗೆ ವ್ಯಥೆಯಾಯಿತು. ಆದರೆ ಅತಿಥಿಗಳ ಮುಂದೆ ಮಾಡಿದ ಪ್ರಮಾಣ ಮುರಿಯಲಾಗದೆ ಅವಳ ಇಚ್ಛೆಯನ್ನು ಪೂರೈಸುವಂತೆ ಆಜ್ಞೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಮಾತಿಗೆ ಅರಸನು ದುಃಖಪಟ್ಟರೂ ತಾನು ಇಟ್ಟುಕೊಂಡ ಆಣೆಗಳ ನಿವಿುತ್ತವಾಗಿಯೂ ತನ್ನ ಸಂಗಡ ಪಙ್ತಿಯಲ್ಲಿ ಕೂತಿದ್ದವರ ನಿವಿುತ್ತವಾಗಿಯೂ ಅದನ್ನು ತಂದುಕೊಡುವದಕ್ಕೆ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ರಾಜ ಹೆರೋದನು ಬಹಳವಾಗಿ ದುಃಖಪಟ್ಟನು. ಆದರೆ ಏನು ಕೇಳಿದರೂ ಕೊಡುತ್ತೇನೆಂದು ಅವನು ಅವಳಿಗೆ ವಾಗ್ದಾನ ಮಾಡಿದ್ದನು. ಹೆರೋದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದವರು ಸಹ ಆ ವಾಗ್ದಾನವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ಕೊಡುವುದಕ್ಕೆ ಹೆರೋದನು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅರಸನು ದುಃಖಪಟ್ಟರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ರಾಜಾಕ್ ಬೆಜಾರ್ ದಿಸ್ಲೊ. ಖರೆ ಸಗ್ಳ್ಯಾ ಯೆಲ್ಲ್ಯಾ ಸೊಯ್ರ್ಯಾಂಚ್ಯಾ ಇದ್ರಾಕ್ ದಿಲ್ಲ್ಯಾ ಗೊಸ್ಟಿಕ್‍ಲಾಗುನ್ ತ್ಯಾ ಚೆಡ್ವಾನ್ ಇಚಾರಲ್ಲೆ ಕರುಕ್ ಸೈನಿಕಾಕ್ನಿ ಹುಕುಮ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:9
27 ತಿಳಿವುಗಳ ಹೋಲಿಕೆ  

ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.


ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.


ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.


ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.


ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,


ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.


ಅದಕ್ಕೆ ಸೌಲನು, “ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ” ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.


ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು.


ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.


ಇಸ್ರಾಯೇಲರೆಲ್ಲರೂ ಮಿಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು.


ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!


ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.


ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು