Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೇಗಂದರೆ ಮನಸ್ಸಿನೊಳಗಿಂದ ಕೆಟ್ಟ ಆಲೋಚನೆ ಕೊಲೆ ಹಾದರ ಸೂಳೆಗಾರಿಕೆ ಕಳ್ಳತನ ಸುಳ್ಳುಸಾಕ್ಷಿ ಬೈಗಳು ಹೊರಟು ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆಚ್ಯಾ ಮನಾತ್ನಾ ಬುರ್ಶ್ಯಾ ಯವ್ಜನ್ಯಾ ಅನಿ ತ್ಯಾ ಯವ್ಜನ್ಯಾ ತೆಕಾ, ಅನಿಎಕ್ಲ್ಯಾಕ್ ಜಿವಾನಿ ಮಾರಿ ಸರ್ಕೆ ಕರ್‍ತ್ಯಾತ್ ವೆಭಿಚಾರ್ ಕರಿ ಸರ್ಕೆ ಕರ್‍ತ್ಯಾತ್, ಅನಿ ಬುರ್ಶಿ ಕಾಮಾ ಕರಿ ಸರ್ಕೆ ಕರುಕ್ ಲಾವ್ತ್ಯಾತ್, ಚೊರಿ ಸರ್ಕೆ ಕರ್‍ತ್ಯಾತ್, ಝಟೆ ಬೊಲಿ ಸರ್ಕೆ ಕರ್‍ತ್ಯಾತ್ ಅನಿ ದುಸ್ರ್ಯಾಕ್ನಿ ಗಾಳಿಯಾ ದಿತಲೆ ಸರ್ಕೆ ಕರ್‍ತ್ಯಾತ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:19
24 ತಿಳಿವುಗಳ ಹೋಲಿಕೆ  

ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.


ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ.


ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ.


ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.


ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?


ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.


ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.


ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.


ಅದಕ್ಕೆ ಬಿಳಾಮನು ಕತ್ತೆಗೆ, “ನೀನು ಇಷ್ಟ ಬಂದಂತೆ ನನ್ನನ್ನು ಆಡಿಸಿದೆಯಲ್ಲಾ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ” ಎಂದನು.


ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.


ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು