Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಯೇಸು, “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,” ಎಂದರು. ಅದೇ ಕ್ಷಣದಲ್ಲಿ ಆಕೆಯ ಮಗಳು ಗುಣಹೊಂದಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಯೇಸು ಆಕೆಗೆ - ಅಮ್ಮಾ, ನಿನ್ನ ನಂಬಿಕೆ ಬಹಳ; ನಿನ್ನ ಮನಸ್ಸಿನಂತೆ ಆಗಲಿ ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಉತ್ತರವಾಗಿ ಆಕೆಗೆ, “ಅಮ್ಮಾ ನಿನ್ನ ನಂಬಿಕೆಯು ದೊಡ್ಡದು! ನೀನು ಇಷ್ಟಪಟ್ಟಂತೆಯೇ ನಿನಗಾಗಲಿ,” ಎಂದು ಹೇಳಿದರು. ಆಕೆಯ ಮಗಳು ಅದೇ ಗಳಿಗೆಯಲ್ಲಿ ಗುಣಹೊಂದಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತೆಚೆಸಾಟ್ನಿ ಜೆಜುನ್ ತಿಕಾ,“ತಿಯಾ ಎಕ್ ಘಟ್ ವಿಶ್ವಾಸ್ ಹೊತ್ತಿ ಬಾಯ್ಕೊಮನುಸ್! ತುಕಾ ಕಾಯ್ ಪಾಜೆ ಹೊಲ್ಲೆ ಹಾಯ್ ತೆ ಹೊಂವ್ದಿತ್!” ಮಟ್ಲ್ಯಾನ್. ತನ್ನಾ ತಾಬೊಡ್ತೊಬ್ ತಿಚಿ ಲೆಕ್ ಗುನ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:28
21 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಆ ಶತಾಧಿಪತಿಗೆ, “ನೀನು ನಂಬಿದಂತೆ ನಿನಗಾಗಲಿ, ಹೋಗು” ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.


ಆತನು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ” ಎಂದು ಹೇಳಿದನು.


ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.


ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.


ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು,


ಆದರೆ ಆತನು ಆ ಹೆಂಗಸಿಗೆ, “ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು” ಎಂದು ಹೇಳಿದನು.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು.


ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, “ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.


ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.


ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.


ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.


ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು