ಮತ್ತಾಯ 15:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಕುಂಟರು, ಕುರುಡರು, ಮೂಕರು, ಅಂಗವಿಕಲರು ಮುಂತಾದ ಅನೇಕರನ್ನು ತಮ್ಮೊಡನೆ ಕರೆತಂದು ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಯೇಸು ಅವರನ್ನು ಗುಣಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಗ ಜನರು ಗುಂಪುಗುಂಪಾಗಿ ಆತನ ಬಳಿಗೆ ಬಂದು ಕುಂಟರು ಕುರುಡರು ಮೂಕರು ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ಕರತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು; ಆತನು ಅವರನ್ನು ವಾಸಿಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಜನರು ಗುಂಪುಗುಂಪಾಗಿ ಯೇಸುವಿನ ಬಳಿಗೆ ಬಂದರು. ಅವರು ಅನೇಕ ಬಗೆಯ ಕಾಯಿಲೆಯವರನ್ನು ಕರೆದುತಂದು, ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಅಲ್ಲಿ ಅಂಗವಿಕಲರು, ಕುರುಡರು, ಕುಂಟರು, ಕಿವುಡರು ಮತ್ತು ಇತರ ಅನೇಕ ಜನರಿದ್ದರು. ಆತನು ಇವರನ್ನೆಲ್ಲರನ್ನು ಗುಣಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು, ಕುರುಡರನ್ನು, ಮೂಕರನ್ನು, ಊನವಾದವರನ್ನು ಮತ್ತು ಬೇರೆ ಅನೇಕ ರೋಗಿಗಳನ್ನು ತಮ್ಮೊಂದಿಗೆ ಕರೆದುಕೊಂಡು ಬಂದು ಯೇಸುವಿನ ಪಾದದ ಬಳಿಯಲ್ಲಿ ಬಿಟ್ಟರು. ಯೇಸು ಅವರನ್ನೆಲ್ಲಾ ಸ್ವಸ್ಥಪಡಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಎಕ್ ಮೊಟೊ ಲೊಕಾಂಚೊ ತಾಂಡೊ ಜೆಜುಕ್ಡೆ ಯೆಲೊ, ತೆನಿ ಕುಡ್ಡ್ಯಾಕ್ನಿ, ಹಾತ್-ಪಾಯ್ ನಸಲ್ಲ್ಯಾಕ್ನಿ ,ಕಿಂವ್ಡ್ಯಾಕ್ನಿ, ಸೊಟ್ಟ್ಯಾಕ್ನಿ, ಮುಕ್ಕ್ಯಾಕ್ನಿ ಜೆಜುಚ್ಯಾಕ್ನಿ ಪಾಯಾನಿತ್ನಿ ಘೆವ್ನ್ ಯೆವ್‍ಲಾಗಲ್ಲ್ಯಾನಿ. ಅನಿ ಜೆಜುನ್ ತೆಂಕಾ ಗುನ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |