Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಫರಿಸಾಯರು ಮತ್ತು ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸ್ವಾಮಿಯನ್ನು ಪರೀಕ್ಷಿಸುವ ದುರದ್ದೇಶದಿಂದ, “ನೀನು ದೇವರಿಂದ ಬಂದವನೆಂದು ಸೂಚಿಸಲು ಅದ್ಭುತವೊಂದನ್ನು ನಮಗೆ ಮಾಡಿತೋರಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಫರಿಸಾಯರೂ ಸದ್ದುಕಾಯರೂ ಬಂದು ಆತನನ್ನು ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕೆಂದು ಕೇಳಿದರು. ಆತನು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಫರಿಸಾಯರು ಮತ್ತು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವನ್ನು ಪರೀಕ್ಷಿಸಲು, “ನೀನು ದೇವರಿಂದ ಬಂದವನೆಂಬುದನ್ನು ನಿರೂಪಿಸಲು ಒಂದು ಅದ್ಭುತಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಉಲ್ಲೆ ಫಾರಿಜೆವ್ ಅನಿ ಸಾದುಸೆವ್ ಜೆಜುಚಿ ಪರಿಕ್ಷಾ ಕರುಸಾಟಿ ಮನುನ್ ಯೆಲೆ. ಅನಿ, “ತಿಯಾ ಸರ್ಗಾತ್ನಾ ಯೆಲ್ಲೊ ಮಾನುಸ್ ಮನುನ್ ದಾಕ್ವುಕ್ ಎಕ್ ಮೊಟೆ ವಿಚಿತ್ರ್ ಕಾಮ್ ಕರುನ್ ದಾಕ್ವು.” ಮನುನ್ ಜೆಜುಕ್ಡೆ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:1
33 ತಿಳಿವುಗಳ ಹೋಲಿಕೆ  

ಬೇರೆ ಕೆಲವರು ಆತನನ್ನು ಪರೀಕ್ಷಿಸುವುದಕ್ಕಾಗಿ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿತೋರಿಸು” ಎಂದು ಕೇಳಿದರು.


ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.


ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.


ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;


ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.


ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,


ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,


ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು,


ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,


ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು,


ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು.


ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು.


ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು,


“ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ;


ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.


ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?


ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು


ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,


ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು,


ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು.


ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.


ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.


ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು, ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು