Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ಜೆಜುನ್,“ಸಿಮಾವ್ ಯೊನಾಚ್ಯಾ ಲೆಕಾ ತಿಯಾ ಧನ್ಯ್, ಹೆ ಖರೆ, ತುಜ್ಯಾ ಮನಾಚ್ಯಾ ಭುತ್ತುರ್ ಖಲ್ಯಾಬಿ ರಗ್ತಾ ಮಾಸಾನಿ ಉಪಾಜಲ್ಲ್ಯಾ ಮಾನ್ಸಾಕ್ನಾ ಯೆವ್ಕ್ ನಾ; ಹೆ ಮಾಜ್ಯಾ ಸರ್‍ಗಾ ವೈಲ್ಯಾ ಬಾಬಾನ್ ತುಜ್ಯಾ ಮನಾತ್ ಘಾಟ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:17
25 ತಿಳಿವುಗಳ ಹೋಲಿಕೆ  

‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,


ಸಹೋದರರೇ, ನಾನು ಹೇಳುವುದೇನಂದರೆ, ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.


ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.


ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,


ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.


ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,


ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು