Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಪರಲೋಕರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು; ಭೂಲೋಕದಲ್ಲಿ ನೀನು ಯಾವದನ್ನು ಕಟ್ಟುತ್ತೀಯೋ, ಅದು ಪರಲೋಕದಲ್ಲಿಯೂ ಕಟ್ಟಿರುವದು; ಮತ್ತು ಭೂಲೋಕದಲ್ಲಿ ನೀನು ಯಾವದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಿರುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪರಲೋಕರಾಜ್ಯದ ಬೀಗದ ಕೈಗಳನ್ನು ನಾನು ನಿನಗೆ ಕೊಡುತ್ತೇನೆ. ನೀನು ಭೂಲೋಕದಲ್ಲಿ ನೀಡುವ ನ್ಯಾಯತೀರ್ಪು ದೇವರ ನ್ಯಾಯತೀರ್ಪಾಗಿರುತ್ತದೆ. ನೀನು ಭೂಲೋಕದಲ್ಲಿ ನೀಡುವ ಕ್ಷಮೆಯು ದೇವರ ಕ್ಷಮೆಯಾಗಿರುತ್ತದೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುವೆನು; ನೀನು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀಯೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀನು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಿಯಾ ತುಕಾ ಸರ್ಗಾಚ್ಯಾ ರಾಜಾಚ್ಯಾ ಚಾವಿಯಾ ದಿತಾ; ಜೆ ಖಲ್ಯಾಕ್ ತಿಯಾ ಹ್ಯಾ ಜಗಾತ್ ಪರವಾನ್ಗಿ ದಿತೆಯ್ ತೆಕಾ ಸರ್‍ಗಾ ವರ್‍ತಿಬಿ ಪರವಾನ್ಗಿ ದಿವ್ನ್ ಹೊತಾ. ಅನಿ ಜೆ ಖಲ್ಯಾಕ್ ತಿಯಾ ಹ್ಯಾ ಜಗಾತ್ ಪರ್‍ವಾನ್ಗಿ ದಿನೆಯ್ ತೆಕಾ ಸರ್‍ಗಾ ವರ್‍ತಿಬಿ ಪರ್‍ವಾನ್ಗಿ ದಿವ್ನ್ ಹೊಯ್ನಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:19
14 ತಿಳಿವುಗಳ ಹೋಲಿಕೆ  

“ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಾನು ದಾವೀದನ ಮನೆಯ ಬೀಗದ ಕೈಯನ್ನು ನಿನ್ನ ಹೊಣೆಗಾರಿಕೆಗೆ ಕೊಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.


ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು.


ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.


ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.


ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು.


ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.


“ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು