ಮತ್ತಾಯ 16:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದುಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತ್ಯಾ ದಿಸಾಕ್ನಾ ಪಿಢೆ ಜೆಜು ಅಪ್ನಾಚ್ಯಾ ಶಿಸಾಕ್ನಿ, “ಮಿಯಾ ಜೆರುಜಲೆಮಾಕ್ ಜಾವ್ಕ್ ಪಾಜೆ ಅನಿ ಥೈ ಮುಖಂಡಾನಿಕ್ನಾ, ಮುಖ್ಯ ಯಾಜಕಾನಿಕ್ನಾ ಅನಿ ಖಾಯ್ದೆ ಶಿಕ್ವುತಲ್ಯಾನಿಕ್ನಾ ಮಿಯಾ ಲೈ ತರಾಸ್ ಸೊಸುಕ್ ಪಾಜೆ. ಮಾಕಾ ಜಿವಾನಿ ಮಾರುನ್ ಹೊತಾ; ಖರೆ ತಿನ್ ದಿಸಾಂಚ್ಯಾ ಮಾನಾ ಮಿಯಾ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಕಾಯ್ಬಿ ಧಾಪುನ್ ಘೆಯ್ನಸ್ತಾನಾ ಫೊಡುನ್ ಸಾಂಗುಕ್‍ಲಾಲೊ. ಅಧ್ಯಾಯವನ್ನು ನೋಡಿ |