ಮತ್ತಾಯ 16:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಕಾಶದಲ್ಲಿ ಕಾಣುವ ಲಕ್ಷಣಗಳನ್ನು ನೀವು ಅರ್ಥಮಾಡಿಕೊಳ್ಳಬಲ್ಲಿರಿ; ಆದರೆ ಈಗಿನ ಕಾಲದ ಲಕ್ಷಣಗಳನ್ನು ಅರ್ಥಮಾಡಿಕೊಳ್ಳಲು ನಿಮ್ಮಿಂದಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಬೆಳಿಗ್ಗೆ - ಆಕಾಶವು ಮೋಡಮುಚ್ಚಿಕೊಂಡು ಕೆಂಪಾಗಿದೆ, ಈ ಹೊತ್ತು ಗಾಳಿ ಮಳೆ ಅನ್ನುತ್ತೀರಿ ಅಲ್ಲವೇ. ಆಕಾಶದ ಸ್ಥಿತಿಯನ್ನು ನೋಡಿ ಇದು ಹೀಗೆ ಅದು ಹಾಗೆ ಅನ್ನುವದಕ್ಕೆ ಬಲ್ಲಿರಿ; ಆದರೆ ಈ ಕಾಲದ ಸೂಚನೆಗಳನ್ನು ತಿಳುಕೊಳ್ಳಲಾರಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಬೆಳಿಗ್ಗೆ ಆಕಾಶವು ಮೋಡ ಕವಿದು ಕೆಂಪಾಗಿದ್ದರೆ, ‘ಇಂದು ಬಿರುಗಾಳಿ ಇರುವುದು’ ಎಂದೂ ನೀವು ಹೇಳುತ್ತೀರಿ. ಆಕಾಶದಲ್ಲಾಗುವ ಸೂಚನೆಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಕಾಲದ ಸೂಚನೆಗಳನ್ನು ನೀವು ಗ್ರಹಿಸಲಾರಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 “ಅನಿ ಸಕ್ಕಾಳಿ ಫಿಡೆ ಮಳಬ್ ತಾಂಬ್ಡೊ ಅನಿ ಎಕ್ ನಮುನಿ ಕಾಳೊಕ್ ಹೊಲ್ಲ್ಯಾ ಸರ್ಕೊ ಹೊವ್ನ್ ರ್‍ಹಾಲ್ಯಾರ್, ‘ಪಾವ್ಸ್ ಯೆನಾರ್ ಹಾಯ್.’” ಮನ್ತ್ಯಾಶಿ. ಮಳ್ಬಾಕ್ ಬಗುಕ್ ವಾತಾವರನ್ ಕಶೆ ಹಾಯ್ ಮನುನ್ ತುಮಿ ಕಳ್ವುನ್ ಘೆತ್ಯಾಶಿ, ಖರೆ ಹ್ಯಾ ದಿಸಾಂಚಿ ವಳಕ್ ತುಮ್ಕಾ ವಳ್ಕುನ್ ಘೆವ್ಕ್ ಹೊಯ್ನಾ. ಅಧ್ಯಾಯವನ್ನು ನೋಡಿ |