Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಎಂದು ಹೇಳಲು ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ಶಿಷ್ಯರಿಗೆ, “ಎಚ್ಚರಿಕೆಯಿಂದಿರಿ! ಫರಿಸಾಯರ ಮತ್ತು ಸದ್ದುಕಾಯರ ಹುಳಿಗೆ ಒಳಗಾಗಬೇಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೇಸು ಅವರಿಗೆ, “ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ಬಗ್ಗೆ ಎಚ್ಚರಿಕೆ ವಹಿಸಿ ಜಾಗರೂಕರಾಗಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೆಜುನ್ ತೆಂಕಾ, “ಫಾರಿಜೆವಾಂಚ್ಯಾ ಅನಿ ಸಾದುಸೆವಾಂಚ್ಯಾ ಸೊಡ್ಯಾಚ್ಯಾ ವಿಶಯಾತ್ ಉಶ್ಯಾರ್ಕಿನ್‍ ರ್‍ಹಾವಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:6
15 ತಿಳಿವುಗಳ ಹೋಲಿಕೆ  

ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.


ಸ್ವಲ್ಪ ಹುಳಿಯಿಂದ ಕಣಕವೆಲ್ಲಾ ಹುಳಿಯಾಗುವುದು.


ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.


ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.


“‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.


ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.


ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?


ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.


ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.


ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.


ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.


ಶಿಷ್ಯರು, “ಆತನಿಗೆ ಯಾರಾದರೂ ಊಟಕ್ಕೆ ತಂದು ಕೊಟ್ಟರೇನೊ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು