Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದಕ್ಕೆ ಯೇಸು - ಎಲಾ, ನಂಬಿಕೆಯಿಲ್ಲದಂಥ ಮೂರ್ಖ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ಜೆಜುನ್,“ಯೆ,ವಿಶ್ವಾಸ್ ನಸಲ್ಲ್ಯಾ ಬುರ್ಶ್ಯಾ ಪಿಳ್ಗಿಚ್ಯಾನು, ಅನಿ ಕವ್ಡೆ ದಿಸ್ ತುಮ್ಚ್ಯಾ ವಾಂಗ್ಡಾ ಮಿಯಾ ರ್‍ಹಾವ್ಚೆ? ಅನಿ ಕವ್ಡೆ ಪತರ್ ಮಿಯಾ ತುಮ್ಕಾ ಸಂಬಾಳುನ್ ಘೆವ್ನ್ ಜವ್ಚೆ? ತ್ಯಾ ಪೊರಾಕ್ ಮಾಜೆಕ್ಡೆ ಘೆವ್ನ್ ಯೆವಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:17
25 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?


ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!


ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,


ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.


ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ.


ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.


“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


“ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.


ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,


ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.


ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?


ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವಿ?


ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.


ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.


ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ. ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.


ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು.


ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.


ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.


ನಾನು ನನ್ನನ್ನು ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನೀವು ನನ್ನನ್ನು ಸಹಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು