Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಅವರ ಮಾತನ್ನು ಕೇಳದೆ ಹೋದರೆ ಸಭೆಗೆ ಹೇಳು; ಆದರೆ ಸಭೆಯ ಮಾತನ್ನೂ ಕೇಳದೆಹೋದರೆ ಅವನು ನಿನಗೆ ಅಜ್ಞಾನಿಯಂತೆಯೂ ಭ್ರಷ್ಟನಂತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವನು ಅವರ ಮಾತನ್ನೂ ಕೇಳದಿದ್ದರೆ, ಸಭೆಗೆ ತಿಳಿಸು. ಅವನು ಸಭೆಯ ಮಾತನ್ನೂ ಕೇಳದಿದ್ದರೆ ಅವನನ್ನು ದೇವರಲ್ಲಿ ನಂಬಿಕೆ ಇಡದ ಮನುಷ್ಯನಂತಾಗಲಿ ಸುಂಕವಸೂಲಿಗಾರನಂತಾಗಲಿ ಪರಿಗಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ಅವರಿಗೂ ಕಿವಿಗೊಡದೆ ಹೋದರೆ ಅದನ್ನು ಸಭೆಗೆ ತಿಳಿಸು. ಅವರು ಸಭೆಗೂ ಕಿವಿಗೊಡದೆ ಹೋದರೆ, ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆಕಾಬಿ ತೊ ಅಯ್ಕಿನಸ್ಲ್ಯಾರ್ ಹೊಲ್ಲೆ ಸಗ್ಳೆ ವಿಶಯ್, ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಸಾಂಗಾ. ಆಕ್ರಿಕ್ ತೊ ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ಸಗ್ಳ್ಯಾ ಲೊಕಾಕ್ನಿಬಿ ಅಯ್ಕಿನಸ್ಲ್ಯಾರ್, ಎಕ್ ತೆರ್‍ಗಿ ವಸುಲಿ ಕರ್‍ತಲೊ ಮಾನುಸ್, ನಾಹೊಲ್ಯಾರ್ ಎಕ್ ದೆವಾ ವರ್‍ತಿ ವಿಶ್ವಾಸ್ ಥೈ ನಸಲ್ಲೊ ಮಾನುಸ್ ಮನುನ್ ಯವ್ಜುನ್, ತೆಕಾ ಸೊಡುನ್ ಸೊಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:17
27 ತಿಳಿವುಗಳ ಹೋಲಿಕೆ  

ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.


ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ.


“‘ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”


ದೇಶಾಂತರದಿಂದ ಬಂದ ಇಸ್ರಾಯೇಲರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವುದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು, ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕಭೋಜನಮಾಡಿದರು.


ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.


ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಿದ್ದರು.


ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರ ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.


ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.


ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ.


ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಫಾಯನ ಮಗ ಯಾಕೋಬ, ತದ್ದಾಯ,


ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ಏನಾದರೂ ವಿವಾದವಿದ್ದರೆ ನ್ಯಾಯವಿಚಾರಣೆಗೆ ದೇವಜನರೆದುರು ತೆಗೆದುಕೊಂಡು ಹೋಗದೇ ಅನ್ಯಜನರ ಮುಂದೆ ತೆಗೆದುಕೊಂಡು ಹೋಗುವಿರೋ?


ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು