Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳತಕ್ಕ ಯಾವದಾದರೂ ಒಂದು ಕಾರ್ಯದ ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದಲ್ಲದೆ ನಿಮ್ಮಲ್ಲಿ ಇಬ್ಬರು ಈ ಲೋಕದಲ್ಲಿ ಒಮ್ಮನಸ್ಸಿನಿಂದ ಏನನ್ನೇ ಬೇಡಿಕೊಂಡರೂ ಪರಲೋಕದಲ್ಲಿರುವ ನನ್ನ ತಂದೆ ಅದನ್ನು ನೆರವೇರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 “ಅನಿ ಜಾಸ್ತಿಚೆ ಮಿಯಾ ತುಮ್ಕಾ ಖರೆಚ್ ಸಾಂಗುಚೆ ಜಾಲ್ಯಾರ್, ಹ್ಯಾ ಜಗಾತ್ ಕನ್ನಾಬಿ ತುಮಿ ದೊಗೆ ಜಾನಾ ಎಕುಚ್ ಮನಾಚೆ ಹೊವ್ನ್ ಕಸ್ಲ್ಯಾಸಾಟ್ನಿಬಿ ಮಾಗ್ನಿ ಕರ್‍ಲ್ಯಾರ್, ಸರ್ಗಾ ವರ್‍ತಿಬಿ ಮಾಜೊ ಸರ್‍ಗಾ ವೈಲೊ ಬಾಬಾ ತೆ ತುಮ್ಕಾ ಕರುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:19
20 ತಿಳಿವುಗಳ ಹೋಲಿಕೆ  

“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;


ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.


ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.


ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.


ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.


ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.


ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.


ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.


ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.


ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.


ನಾವಾದರೋ ಪ್ರಾರ್ಥನೆಯನ್ನೂ, ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು” ಎಂದು ಹೇಳಿದರು.


ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು