Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಅವನಿಗೆ, “ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಏಳುಸಲವಲ್ಲ, ಏಳೆಪ್ಪತ್ತುಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ,” ಎಂದು ಯೇಸು ಉತ್ತರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೇಸು ಅವನಿಗೆ - ಏಳು ಸಾರಿ ಎಂದಲ್ಲ, ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸು, “ಏಳು ಸಲಕ್ಕಿಂತಲೂ ಹೆಚ್ಚಾಗಿ ಕ್ಷಮಿಸಬೇಕು. ಅವನು ನಿನಗೆ ಎಪ್ಪತ್ತೇಳು ಸಲ ತಪ್ಪು ಮಾಡಿದರೂ ನೀನು ಅವನನ್ನು ಕ್ಷಮಿಸುತ್ತಲೇ ಇರಬೇಕೆಂದು ನಾನು ನಿನಗೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಯೇಸು, “ಏಳು ಸಲವಲ್ಲ, ಏಳೆಪ್ಪತ್ತು ಸಲ ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ಜೆಜುನ್, “ಸಾತ್ ದಾ ನ್ಹಯ್, ಸಾತಾಚೆ ಸತ್ತರ್ ಪಟಿ ಮಾಪ್ ಕರುಚೆ.” ಮನುನ್ ಜಬಾಬ್ ದಿಲ್ಯಾನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:22
13 ತಿಳಿವುಗಳ ಹೋಲಿಕೆ  

ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.


ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.


ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.


ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು.


ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.


ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು. ನಮ್ಮ ಅಪರಾಧಗಳನ್ನು ಅಣಗಿಸುವವನು. ದೇವರೇ, ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬೀಸಾಡಿಬಿಡುವಿ.


“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.


ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು