ಮತ್ತಾಯ 18:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತು ಬಿಸಾಡಿಬಿಡು. ಎರಡು ಕಣ್ಣುಳ್ಳವನಾಗಿ ನರಕಾಗ್ನಿಗೆ ದಬ್ಬಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ಅಮರಜೀವವನ್ನು ಪಡೆ. ಅದೇ ನಿನಗೆ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಟುಬಿಡು; ಎರಡು ಕಣ್ಣುಳ್ಳವನಾಗಿದ್ದು ಅಗ್ನಿ ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ಜೀವದಲ್ಲಿ ಸೇರುವದು ನಿನಗೆ ಉತ್ತಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿನ್ನ ಕಣ್ಣು ನಿನ್ನನ್ನು ಪಾಪಕ್ಕೆ ನಡೆಸಿದರೆ, ಅದನ್ನು ಕಿತ್ತು ಎಸೆದುಬಿಡು. ಎರಡು ಕಣ್ಣುಳ್ಳವನಾಗಿದ್ದು ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವ ಹೊಂದುವುದೇ ನಿನಗೆ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ನೀವು ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತುಮ್ಚೊ ಡೊಳೊ ತುಮ್ಚೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಾ ಜಾಲ್ಯಾರ್, ತೊ ಮೆಟ್ಟುನ್ ಕಾಡುನ್ ಧುರ್ ನ್ಹೆವ್ನ್ ಟಾಕಾ, ದೊನ್ ಡೊಳೆ ಥವ್ನ್ ಘೆವ್ನ್, ನರ್‍ಕಾತ್ ಆಗಿತ್ ಪಡ್ತಲ್ಯಾಚ್ಯಾನ್ಕಿ ಎಕ್ ಡೊಳೊ ನಸ್ತಾನಾ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಕ್ ಜಾತಲೆ ತುಮ್ಕಾ ಕವ್ಡೆಕಿ ಬರೆ.” ಅಧ್ಯಾಯವನ್ನು ನೋಡಿ |