Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಒಮ್ಮೆ ಯೇಸುಸ್ವಾಮಿಯ ಬಳಿಗೆ ಒಬ್ಬ ಯುವಕನು ಬಂದು, “ಗುರುದೇವಾ, ಅಮರ ಜೀವವನ್ನು ಪಡೆಯಲು ನಾನು ಒಳ್ಳೆಯದೇನನ್ನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಒಬ್ಬನು ಬಂದು ಆತನನ್ನು - ಬೋಧಕನೇ, ನಾನು ನಿತ್ಯಜೀವವನ್ನು ಪಡೆಯಬೇಕಾದರೆ ಏನು ಒಳ್ಳೇ ಕಾರ್ಯವನ್ನು ಮಾಡಬೇಕು ಎಂದು ಕೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವ ಹೊಂದಲು ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಒಬ್ಬನು ಬಂದು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಎಗ್ದಾ ಎಕ್ ಮಾನುಸ್ ಜೆಜುಕ್ಡೆ ಯೆಲೊ. ಅನಿ “ಗುರುಜಿ, ಕನ್ನಾಚ್ ಮರಾನ್ ನಸಲ್ಲೆ ಜಿವನ್ ಮಾಕಾ ಗಾವುಚೆ ಮಟ್ಲ್ಯಾರ್ ಮಿಯಾ ಕಾಯ್ ಬರೆ ಕಾಮ್ ಕರುಚೆ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:16
32 ತಿಳಿವುಗಳ ಹೋಲಿಕೆ  

ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.


ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.


ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,


ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.


ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.


ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.


ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.


ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.


ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.


ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.


ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.


ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು