Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವಂತನು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸುವುದು ಕಷ್ಟವೆಂದು ನಿಮಗೆ ಒತ್ತಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಯೇಸು ತನ್ನ ಶಿಷ್ಯರನ್ನು ನೋಡಿ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಐಶ್ವರ್ಯವಂತನು ಪರಲೋಕರಾಜ್ಯದಲ್ಲಿ ಸೇರುವದು ಕಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಯೇಸು ತನ್ನ ಶಿಷ್ಯರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಐಶ್ವರ್ಯವಂತನು ಪರಲೋಕರಾಜ್ಯಕ್ಕೆ ಪ್ರವೇಶಿಸುವುದು ಬಹಳ ಕಷ್ಟಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಯೇಸು ತಮ್ಮ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ, “ತುಮ್ಕಾ ಖರೆಚ್ ಸಾಂಗ್ತಾ, ಎಕ್ ಸಾವ್ಕಾರ್ ಮಾನ್ಸಾಕ್ ಸರ್‍ಗಾಚ್ಯಾ ರಾಜಾತ್ ಜಾವ್ನ್ ಪಾವುಚೆ ಮಟ್ಲ್ಯಾರ್ ಲೈ ಕಸ್ಟ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:23
25 ತಿಳಿವುಗಳ ಹೋಲಿಕೆ  

ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.


ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು.


ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ.


ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.


ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.


ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.


ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.


ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.


ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು