Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೇಸು ಅವರನ್ನು ದೃಷ್ಟಿಸಿ ನೋಡಿ - ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೇಸು ತನ್ನ ಶಿಷ್ಯರ ಕಡೆಗೆ ದೃಷ್ಟಿಸಿ, “ಇದು ಮನುಷ್ಯರಿಗೆ ಅಸಾಧ್ಯವಾದ ಕಾರ್ಯ. ಆದರೆ ದೇವರಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಜೆಜುನ್ ನಿಟ್ಟ್ ತೆಂಚೆಕ್ಡೆ ಬಗಟ್ಲ್ಯಾನ್, ಅನಿ,“ ಮಾನ್ಸಾಕ್ ಹೆ ಕರುಕ್ ಹೊಯ್ನಾ ತೆ ಖರೆ ಹಾಯ್, ಖರೆ ದೆವಾಕ್ ಸಗ್ಳೆ ಕರುಕ್ ಹೊತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:26
16 ತಿಳಿವುಗಳ ಹೋಲಿಕೆ  

“ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?


ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು.


“ನೀನು ಸಕಲ ಕಾರ್ಯಗಳನ್ನು ನಡೆಸಬಲ್ಲೆಯೆಂತಲೂ, ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ.


ಆತನು, “ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ” ಅಂದನು.


ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು.


“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?” ಇದು ಸೇನಾಧೀಶ್ವರ ಯೆಹೋವನ ನುಡಿ.


ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.


ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, “ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?” ಎಂದು ಕೇಳಿದರು.


ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.


ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.


ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು