Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಪೇತ್ರನು ಆಗ ಮುಂದೆ ಬಂದು, “ನೋಡಿ, ನಾವು ಎಲ್ಲವನ್ನು ಬಿಟ್ಟುಬಿಟ್ಟು ತಮ್ಮನ್ನು ಹಿಂಬಾಲಿಸಿದ್ದೇವೆ. ನಮಗೇನು ದೊರಕುತ್ತದೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಪೇತ್ರನು ಆತನನ್ನು - ಇಗೋ, ನಾವು ಎಲ್ಲಾ ಬಿಟ್ಟುಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ನಮಗೆ ಏನು ದೊರಕುವದು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಪೇತ್ರನು ಯೇಸುವಿಗೆ, “ನಾವು ನಮಗಿದ್ದ ಪ್ರತಿಯೊಂದನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು. ನಮಗೆ ಏನು ದೊರಕುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಪೇತ್ರನು ಯೇಸುವಿಗೆ, “ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ! ನಮಗೆ ಏನು ದೊರೆಯುವುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ಪೆದ್ರುನ್, ಬಗ್, ಅಮಿ ತರ್ ಸಗ್ಳೆ-ಸಗ್ಳೆ ಸೊಡುನ್ ದಿವ್ನ್, ತುಜ್ಯಾ ವಾಂಗ್ಡಾಚ್ ಹಾಂವ್. ಅಮ್ಕಾ ಕಾಯ್ ಗಾವ್ತಾ? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:27
17 ತಿಳಿವುಗಳ ಹೋಲಿಕೆ  

ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.


ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಮತ್ತು ಎಲ್ಲವನ್ನು ಬಿಟ್ಟು ಅಂದಿನಿಂದ ಯೇಸುವನ್ನು ಹಿಂಬಾಲಿಸಿದರು.


ಆಗ ಪೇತ್ರನು, “ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು” ಎಂದು ಹೇಳಲು,


ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.


ಪೇತ್ರನು ಆತನಿಗೆ, “ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ” ಎಂದು ಹೇಳುವುದಕ್ಕೆ ಪ್ರಾರಂಭಿಸಿದನು.


ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.


ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.


ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.


ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.


ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?


ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.


ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.


ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು