ಮತ್ತಾಯ 19:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯೇಸು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವಾಗ ನನ್ನನ್ನು ಹಿಂಬಾಲಿಸಿರುವ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಜೆಜುನ್ ತೆಂಕಾ,“ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಮಾನ್ಸಾಚೊ ಲೆಕ್ ಮಹಿಮೆನ್ ಅಪ್ನಾಚ್ಯಾ ಸಿವಾಸನಾ ವರ್‍ತಿ ಬಸಲ್ಲ್ಯಾ ತನ್ನಾ ಸಗ್ಳೆ ನ್ಹವೆ ಕರ್‍ತಾ. ತನ್ನಾ ತುಮಿ ಬಾರಾ ಜಾನಾ ಮಾಜ್ಯಾ ವಾಂಗ್ಡಾ ಹೊತ್ತೆ ಇಸ್ರಾಯೆಲಾಚ್ಯಾ ಬಾರಾ ಘರಾನ್ಯಾಂಚ್ಯಾ ವರ್‍ತಿ ರಾಜ್ ಚಾಲ್ವುಕ್ ಬಾರಾ ಸಿವಾಸನಾಂಚ್ಯಾ ವರ್‍ತಿ ಬಸ್ತ್ಯಾಶಿ. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.