Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೀಗಿರುವಲ್ಲಿ, ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರವಾಗಿರುವರು. ಈ ನಿಮಿತ್ತ ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದೆ ಇರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯರು ಅಗಲಿಸಬಾರದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಇವರಿಬ್ಬರು ಇನ್ನು ಮೇಲೆ ಇಬ್ಬರಲ್ಲ, ಒಬ್ಬರೇ. ಅವರಿಬ್ಬರನ್ನು ದೇವರೇ ಒಟ್ಟಿಗೆ ಕೂಡಿಸಿದ್ದಾನೆ. ಆದ್ದರಿಂದ ಯಾವ ಮನುಷ್ಯನೂ ಅವರನ್ನು ಪ್ರತ್ಯೇಕಿಸಬಾರದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿಸಿದ್ದನ್ನು, ಮನುಷ್ಯನು ಅಗಲಿಸಬಾರದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆಚೆಸಾಟ್ನಿ ತೆನಿ, ಅನಿ ಫಿಡೆ ದೊಗೆ ನ್ಹಯ್ ಎಕುಚ್ ಆಂಗ್. ಅಶೆ ರ್‍ಹಾತಾನಾ ದೆವಾನ್ ಜೊಡಲ್ಲೆ ಖಲ್ಯಾಬಿ ಮಾನ್ಸಾನ್ ಎಗ್ಳುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:6
10 ತಿಳಿವುಗಳ ಹೋಲಿಕೆ  

ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಇದಕ್ಕೆ ದೃಷ್ಟಾಂತ, ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ.


ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.


“ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.


ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ, ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳೆ.


ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನಾನು ಪತ್ನಿತ್ಯಾಗವನ್ನೂ, ಹೆಂಡತಿಗೆ ಅನ್ಯಾಯ ಮಾಡುವವನನ್ನೂ ಹಗೆಮಾಡುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.”


‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’


ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು