Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಧೂಪ ರಕ್ತಬೋಳಗಳನ್ನು ಕಾಣಿಕೆಯಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಜ್ಞಾನಿಗಳು ಮನೆಯನ್ನು ಪ್ರವೇಶಿಸಿ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಮಗುವಿಗೆ ಅಡ್ಡಬಿದ್ದು ಆರಾಧಿಸಿದರು. ತಮ್ಮ ಬೊಕ್ಕಸಗಳನ್ನು ತೆರೆದು ಮಗುವಿಗೆ ಚಿನ್ನ, ಧೂಪ ಮತ್ತು ರಕ್ತಬೋಳಗಳನ್ನು ಕಾಣಿಕೆಯಾಗಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ ತ್ಯಾ ಘರಾತ್ ಗೆಲ್ಯಾನಿ ಅನಿ ತೆಚ್ಯಾ ಬಾಯ್ ಮರಿಕ್ಡೆ ಹೊತ್ತ್ಯಾ ಪೊರಾಕ್ ಬಗುನ್ ಡೊಗ್ಲಾ ಟೆಕುನ್ ತೆಕಾ ಮಾನ್ ಕರ್‍ಲ್ಯಾನಿ. ಮಾನಾ ಅಪ್ನಿ ಹಾನಲ್ಲೆ ಸೊನೆ, ಧುಪ್ ಅನಿ ರಗಾತ್ಬೊಳ್ ಕಾನಿಕ್ ಮನುನ್ ತ್ಯಾ ಪೊರಾಕ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:11
33 ತಿಳಿವುಗಳ ಹೋಲಿಕೆ  

ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.


ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ತ್ವರೆಯಾಗಿ ಹೋಗಿ ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು.


“ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.


ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.


ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.


ಆಕೆಯು ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.


ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.


ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.


ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವಸ್ಥಾನದ ನಾಣ್ಯ ತೂಕದ ಪ್ರಕಾರ ಹತ್ತು ಶೆಕೆಲ್ ಮೇರೆಗೆ ಇರುವುದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ಶೆಕೆಲ್.


ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.


ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು,


ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧದ್ರವ್ಯವನ್ನೂ ಮತ್ತು ರತ್ನಗಳನ್ನೂ ಕೊಟ್ಟಳು. ಶೆಬೆದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ.


“ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,


ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?


ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.


ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು.


ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.


ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು