Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಡುತ್ತಾ, “ನೀವು ಹೋಗಿ ಆ ಮಗುವನ್ನು ಚೆನ್ನಾಗಿ ಹುಡುಕಿರಿ; ಕಂಡಕೂಡಲೇ ನನಗೆ ಬಂದು ತಿಳಿಸಿರಿ. ನಾನೂ ಹೋಗಿ ಆ ಮಗುವನ್ನು ಆರಾಧಿಸಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನೂ ಬಂದು ಅದಕ್ಕೆ ಅಡ್ಡಬೀಳಬೇಕು ಎಂದು ಹೇಳಿ ಅವರನ್ನು ಬೇತ್ಲೆಹೇವಿುಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹೆರೋದನು ಆ ಜ್ಞಾನಿಗಳಿಗೆ, “ನೀವು ಹೋಗಿ ಚೆನ್ನಾಗಿ ವಿಚಾರಣೆ ಮಾಡಿ ಆ ಮಗು ಎಲ್ಲಿದೆ ಎಂಬುದನ್ನು ತಿಳಿದುಕೊಂಡು ನಂತರ ಬಂದು ನನಗೆ ತಿಳಿಸಿರಿ. ಆಗ ನಾನೂ ಹೋಗಿ ಆತನನ್ನು ಆರಾಧಿಸುವೆನು” ಎಂದು ಹೇಳಿ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನೀವು ಹೋಗಿ ಆ ಮಗುವಿನ ವಿಷಯ ಜಾಗರೂಕತೆಯಿಂದ ವಿಚಾರಿಸಿ. ಆ ಮಗು ಸಿಕ್ಕಿದ ಮೇಲೆ ನನಗೆ ತಿಳಿಸಿರಿ, ಆಗ ನಾನೂ ಬಂದು ಅದನ್ನು ಆರಾಧಿಸುವೆನು,” ಎಂದು ಹೇಳಿ ಅವರನ್ನು ಬೇತ್ಲೆಹೇಮಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾನಾ ತೆನಿ ತೆಂಕಾ “ಜಾವಾ ಅನಿ ತ್ಯಾ ಪೊರಾಕ್ ಬರೆ ಕರುನ್ ಹುಡ್ಕುನ್ ಕಾಡಾ ಅನಿ ಮಾಕಾಬಿ ಯೆವ್ನ್ ಸಾಂಗಾ, ಮಿಯಾಬಿ ಜಾವ್ನ್ ತೆಕಾ ಮಾನ್ ಕರುಕ್ ಪಾಜೆ” ಮನುನ್ ಸಾಂಗುನ್ ಬೆತ್ಲೆಹೆಮಾಕ್ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:8
20 ತಿಳಿವುಗಳ ಹೋಲಿಕೆ  

ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.


ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.


ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು,


ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು