ಮತ್ತಾಯ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಜ್ಯೋತಿಷಿಗಳು ಅರಸನ ಮಾತಿಗೆ ತಲೆಬಾಗಿ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು ಅರಸನ ಮಾತನ್ನು ಕೇಳಿ ಹೊರಟಾಗ ಮೂಡಣದೇಶದಲ್ಲಿ ಕಂಡ ನಕ್ಷತ್ರವು ಅವರ ಮುಂದೆ ಮುಂದೆ ನಡೆದು ಕೂಸು ಇದ್ದ ಸ್ಥಳದ ಮೇಲೆ ಬಂದು ನಿಂತಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಜ್ಞಾನಿಗಳು ಅರಸನ ಮಾತನ್ನು ಕೇಳಿ ಅಲ್ಲಿಂದ ಹೊರಟಾಗ, ಪೂರ್ವ ದಿಕ್ಕಿನಲ್ಲಿ ಉದಯಿಸಿದ ನಕ್ಷತ್ರವನ್ನು ಮತ್ತೆ ಕಂಡರು. ಅವರು ಆ ನಕ್ಷತ್ರವನ್ನೇ ಹಿಂಬಾಲಿಸಿದರು. ಆ ನಕ್ಷತ್ರ ಅವರ ಮುಂದೆ ಚಲಿಸುತ್ತಾ ಹೋಗಿ ಮಗುವಿದ್ದ ಸ್ಥಳದ ಮೇಲೆ ನಿಂತುಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ರಾಜನ ಮಾತನ್ನು ಕೇಳಿ ಅವರು ಹೊರಟಾಗ, ಪೂರ್ವದೇಶದಲ್ಲಿ ಅವರು ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು, ಅವರ ಮುಂದೆ ಮುಂದೆ ಸಾಗುತ್ತಾ, ಆ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ರಾಜಾನ್ ಸಾಂಗಲ್ಲೆ ಆಯ್ಕುನ್ ತೆನಿ ಭಾಯ್ರ್ ಯೆಲೆ, ತನ್ನಾ ದಿಸ್ ಉಗಾವ್ತಲ್ಯಾ ದಿಕ್ಕಾಕ್ ದಿಸಲ್ಲಿ ತಿ ಚಿಕ್ಕಿ ತೆಂಕಾ ದಿಸ್ಲಿ, ತಿ ಚಿಕ್ಕಿ ತೆಂಚ್ಯಾ ಫಿಡೆ-ಫಿಡೆ ಜಾವ್ಕ್ ಲಾಗಲ್ಲಿ, ಅನಿ ತೊ ಪೊರ್ ಹೊತ್ತ್ಯಾ ಜಾಗ್ಯಾಕ್ ಜಾವ್ನ್ ಇಬೆ ರ್‍ಹಾಲಿ. ಅಧ್ಯಾಯವನ್ನು ನೋಡಿ |