Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅಪಹಾಸ್ಯ ಮಾಡುವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಅನ್ಯರ ಕೈಗೆ ಒಪ್ಪಿಸುವರು; ಅವನು ಸತ್ತ ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ನನ್ನನ್ನು ಹಾಸ್ಯಮಾಡುವುದಕ್ಕೂ ಕೊರಡೆಗಳಿಂದ ಹೊಡೆಯುವುದಕ್ಕೂ ಶಿಲುಬೆಗೆ ಹಾಕುವುದಕ್ಕೂ ಯೆಹೂದ್ಯರಲ್ಲದವರ ಕೈಗೆ ಒಪ್ಪಿಸಿಕೊಡುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ಮಾನಾ ತೆನಿ ತೆಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಾತ್ ದಿತ್ಯಾತ್. ತೆನಿ ತೆಕಾ ಎಡ್ಸಡ್ತಾತ್, ಬಾರ್‍ಕೊಲಾನಿ ಮಾರ್‍ತ್ಯಾತ್ ಅನಿ ಕುರ್ಸಾರ್ ಮಾರ್‍ತ್ಯಾತ್. ಖರೆ ತಿನ್ ದಿಸಾಂಚ್ಯಾ ಮಾನಾ ತೊ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:19
30 ತಿಳಿವುಗಳ ಹೋಲಿಕೆ  

ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.


ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.


ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.


ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, ನನ್ನ ಮೇಲೆ ಹಲ್ಲುಕಡಿಯುತ್ತಾರೆ.


ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,


ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,


ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.


ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.


ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.


ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.


ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು. ಅವರು ಕೊರಡೆಗಳ ಪೆಟ್ಟಿನಿಂದ ದೇಶದಿಂದ ಹೊರಹಾಕಲ್ಪಟ್ಟಿದ್ದರೆ.


ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.


ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;


ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು