Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತು ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಳಿಕ ಸುಮಾರು ಹನ್ನೆರಡು ಗಂಟೆಗೊಮ್ಮೆ, ಮತ್ತೆ ಮೂರು ಗಂಟೆಗೊಮ್ಮೆ ಹೋಗಿ ಇನ್ನೂ ಕೆಲವರನ್ನು ಕೆಲಸಕ್ಕೆ ಕಳುಹಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ತಿರಿಗಿ ಹೆಚ್ಚುಕಡಿಮೆ ಹನ್ನೆರಡು ಗಂಟೆಗೆ ಮತ್ತು ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಕೂಲಿಯಾಳುಗಳು ಕೆಲಸ ಮಾಡಲು ಅವನ ತೋಟಕ್ಕೆ ಹೋದರು. “ಆ ಯಜಮಾನನು ಅದೇ ರೀತಿ ಸುಮಾರು ಹನ್ನೆರಡು ಗಂಟೆಗೊಮ್ಮೆ ಮತ್ತೆ ಮೂರು ಗಂಟೆಗೊಮ್ಮೆ ಪೇಟೆಗೆ ಹೋದನು. ಆ ಎರಡು ಸಲವೂ ತನ್ನ ಹೊಲದಲ್ಲಿ ಕೆಲಸ ಮಾಡಲು ಬೇರೆ ಕೆಲವು ಕೂಲಿಯವರನ್ನು ಅವನು ಗೊತ್ತುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅವರು ಹೊರಟು ಹೋದರು. “ಅವನು ಸುಮಾರು ಹನ್ನೆರಡು ಗಂಟೆಗೂ ಅನಂತರ ಮೂರು ಗಂಟೆಗೂ ತಿರುಗಿ ಹೋಗಿ ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ತೆನಿ ಗೆಲೆ. ಮಾನಾ ದೊಪಾರ್ಚೆ ಬಾರಾ ಘಂಟ್ಯಾಕ್ ಅನಿ ತಿನ್ ಘಂಟ್ಯಾಕ್ ತೆನಿ ಭಾಯ್ರ್ ಜಾವ್ನ್ ಅಪ್ನಾಚ್ಯಾ ಶೆತಾತ್ ಕಾಮ್ ಕರುಕ್ ಲೊಕಾಕ್ನಿ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:5
15 ತಿಳಿವುಗಳ ಹೋಲಿಕೆ  

ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.


ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.


ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.


ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.


ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.


ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಂಜೆ ನಾಲ್ಕು ಗಂಟೆಯಾಗಿತ್ತು.


ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.


ಮತ್ತೊಂದು ಸಾರಿ ಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು