Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ, “ಈತನು ಯಾರು?” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಯೇಸು ಜೆರುಸಲೇಮನ್ನು ಪ್ರವೇಶಿಸಿದಾಗ ನಗರಕ್ಕೆ ನಗರವೇ ಕಲಕಲಗೊಂಡಿತು. ಜನರು “ಯಾರಿವರು?” ಎಂದು ವಿಚಾರಿಸಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು ಯೆರೂಸಲೇಮನ್ನು ಸೇರಲು ಪಟ್ಟಣವೆಲ್ಲಾ ಗದ್ದಲವಾಗಿ, ಈತನು ಯಾರು? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಳಿಕ ಯೇಸು ಜೆರುಸಲೇಮಿನೊಳಗೆ ಹೋದನು. ಪಟ್ಟಣದಲ್ಲಿದ್ದ ಜನರೆಲ್ಲ ಗಲಿಬಿಲಿಗೊಂಡರು. ಅವರು, “ಈ ಮನುಷ್ಯನು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆರೂಸಲೇಮಿಗೆ ಪ್ರವೇಶಿಸಿದಾಗ, ಪಟ್ಟಣದಲ್ಲಿ ಕೋಲಾಹಲವುಂಟಾಗಿ, “ಇವರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜು ಜೆರುಜಲೆಮಾತ್ ಭುತ್ತುರ್ ಗುಸಲ್ಲ್ಯಾ ತನ್ನಾ ಸಗ್ಳೆ ಶಾರ್ ಅವಾಜಾನ್ ಹಾಲುಲಾಗಲ್ಲೆ. ಅನಿ ಲೊಕಾನಿ “ ಹ್ಯೊ ಕೊನ್ ” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:10
14 ತಿಳಿವುಗಳ ಹೋಲಿಕೆ  

ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು;


ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು.


ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, “ಪಾಪಗಳನ್ನು ಸಹ ಕ್ಷಮಿಸಲು ಇವನಾರು?” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.


ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.


ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.


ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?


ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು


ಹಾಗೆಯೇ ಪ್ರಯಾಣಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇಮಿಗೆ ಬಂದು ಊರೊಳಕ್ಕೆ ಹೋದಾಗ ಅಲ್ಲಿಯ ಜನರಲ್ಲಿ ಕುತೂಹಲ ಮೂಡಿತು. ಸ್ತ್ರೀಯರು, “ಈಕೆಯು ನವೊಮಿಯಲ್ಲವೇ?” ಎಂದು ವಿಚಾರಿಸಲು


ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.


“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು,


ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು.


ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.


ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು