Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರು ಮಾಡಿದ ಅತಿಶಯ ಕಾರ್ಯಗಳನ್ನು ಮುಖ್ಯಯಾಜಕರು ಹಾಗೂ ಧರ್ಮಶಾಸ್ತ್ರಿಗಳು ನೋಡಿದರು. ದೇವಾಲಯದಲ್ಲಿ ಮಕ್ಕಳು, ‘ದಾವೀದಕುಲಪುತ್ರನಿಗೆ ಜಯವಾಗಲಿ’ ಎಂದು ಘೋಷಿಸುವುದನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಮಹಾಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನೂ ದಾವೀದನ ಕುಮಾರನಿಗೆ ಜಯ ಜಯವೆಂದು ದೇವಾಲಯದಲ್ಲಿ ಕೂಗುತ್ತಿರುವ ಹುಡುಗರನ್ನೂ ನೋಡಿ ಸಿಟ್ಟುಗೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮಹಾಯಾಜಕರು ಮತ್ತು ಧರ್ಮೋಪದೇಶಕರು ಇದನ್ನು ನೋಡಿದರು. ಯೇಸು ಮಹತ್ಕಾರ್ಯಗಳನ್ನು ಮಾಡುತ್ತಿರುವುದನ್ನು ಮತ್ತು ದೇವಾಲಯದಲ್ಲಿ ಚಿಕ್ಕಮಕ್ಕಳು ಯೇಸುವನ್ನು ಕೊಂಡಾಡುತ್ತಿರುವುದನ್ನು ಅವರು ಗಮನಿಸಿದರು. ಚಿಕ್ಕ ಮಕ್ಕಳು, “ದಾವೀದನ ಕುಮಾರನಿಗೆ ಸ್ತೋತ್ರವಾಗಲಿ” ಎಂದು ಕೂಗುತ್ತಿದ್ದರು. ಇವುಗಳಿಂದಾಗಿ ಯಾಜಕರು ಮತ್ತು ಧರ್ಮೋಪದೇಶಕರು ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯದಲ್ಲಿ, “ದಾವೀದನ ಪುತ್ರನಿಗೆ ಹೊಸನ್ನ,” ಎಂದು ಕೂಗುವುದನ್ನು ಮುಖ್ಯಯಾಜಕರೂ ನಿಯಮ ಬೋಧಕರೂ ಕಂಡು ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಹಿ ಸಗ್ಳಿ ವಿಚಿತ್ರ್ ಕಾಮಾ ಕರ್‍ತಲೆ ಬಗುನ್, ಅನಿ ದೆವಾಚ್ಯಾ ಗುಡಿತ್ ಪೊರಾ, “ದಾವಿದಾಚ್ಯಾ ಲೆಕಾಕ್ ಹೊಗ್ಳಾಪ್!” ಮನುನ್ ಬೊಬ್ ಮಾರ್‍ತಲೆ ಆಯ್ಕುನ್ ಮುಖ್ಯ ಯಾಜಕಾಕ್ನಿ ಅನಿ ಖಾಯ್ದೆ ಶಿಕ್ವುತಲ್ಯಾಕ್ನಿ ಲೈ ರಾಗ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:15
20 ತಿಳಿವುಗಳ ಹೋಲಿಕೆ  

ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.


ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.


ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.


ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,


ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,


ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.


ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,


ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.


ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.


ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,


ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.


ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು


“ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?” ಎಂದು ಕೇಳಿದ್ದಕ್ಕೆ


ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.


ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.


ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು