Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಮಕ್ಕಳು ಹೇಳುವುದು ನಿನಗೆ ಕೇಳಿಸುತ್ತಿದೆಯೋ?” ಎಂದು ಕೋಪಾವೇಶದಿಂದ ಯೇಸುವನ್ನು ಪ್ರಶ್ನಿಸಿದರು. “ಹೌದು, ಕೇಳಿಸುತ್ತದೆ; ‘ಬಾಲಬಾಲೆಯರ ಬಾಯಿಂದಲೂ ಮೊಲೆಗೂಸುಗಳ ನಾಲಿಗೆಯಿಂದಲೂ ನಿಮಗೆ ಸರ್ವಸ್ತುತಿ ಸಲ್ಲುವಂತೆ ಮಾಡಿದ್ದೀರಿ’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಎಂದೂ ಓದಿಲ್ಲವೆ?” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನಿಗೆ - ಇವರು ಹೇಳುವದನ್ನು ಕೇಳುತ್ತೀಯಾ ಎಂದು ಹೇಳಲು ಯೇಸು - ಹೌದು, ಕೇಳುತ್ತೇನೆ, ಸಣ್ಣ ಮಕ್ಕಳ ಬಾಯಿಂದಲೂ ಮೊಲೇಕೂಸುಗಳ ಬಾಯಿಂದಲೂ ಸ್ತೋತ್ರವನ್ನು ಸಿದ್ಧಿಗೆ ತಂದಿ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ? ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಈ ಚಿಕ್ಕಮಕ್ಕಳು ಹೇಳುತ್ತಿರುವ ಮಾತುಗಳನ್ನು ನೀನು ಕೇಳಿಸಿಕೊಂಡೆಯೋ?” ಎಂದು ಕೇಳಿದರು. ಯೇಸು, “ಹೌದು, ‘ನೀನು ಚಿಕ್ಕಮಕ್ಕಳಿಗೂ ಎಳೆಯ ಕೂಸುಗಳಿಗೂ ಸ್ತೋತ್ರಮಾಡಲು ಕಲಿಸಿರುವೆ’ ಎಂದು ಪವಿತ್ರ ಗ್ರಂಥದಲ್ಲಿ ಹೇಳಿದೆ. ನೀವು ಪವಿತ್ರ ಗ್ರಂಥವನ್ನು ಓದಿಲ್ಲವೇ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಮಕ್ಕಳು ಹೇಳುವುದೇನೆಂದು ನಿನಗೆ ಕೇಳಿಸುತ್ತಿದೆಯೋ?” ಎಂದು ಯೇಸುವನ್ನು ಕೇಳಿದರು. ಯೇಸು, “ಹೌದು,” ಎಂದು ಉತ್ತರಿಸಿ ಅವರಿಗೆ, “ ‘ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ,’ ಎಂಬುದನ್ನು ಓದಲಿಲ್ಲವೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆಚೆಸಾಟ್ನಿ ತೆನಿ ಜೆಜುಕ್,“ತೆನಿ ಕಾಯ್ ಮನುಲ್ಯಾತ್ ತುಕಾ ಆಯ್ಕೊ ಯೆವ್ಲಾ ಕಾಯ್?” ಮನುನ್ ಇಚಾರ್‍ಲ್ಯಾನಿ. ತನ್ನಾ ಜೆಜುನ್, “ಮಿಯಾ ಕಾಯ್ ಕರುಕ್ ಹೊತಾ. ಪವಿತ್ರ್ ಪುಸ್ತಕಾತ್, ತುಮಿ ಪೊರಾಕ್ನಿ ಅನಿ ದುದ್ ಫಿತಲ್ಯಾ ಬಾಳ್‌ಶ್ಯಾಕ್ನಿ ಎಗ್ದಮ್ ಸಮಾ ರಿತಿನ್ ಹೊಗ್ಳಾಪ್ ದಿವ್ಚೆ ಮನುನ್ ಶಿಕ್ವುಲ್ಯಾಶಿ; ಮನುನ್ ವಾಚ್ವುಕ್‍ನ್ಯಾಶಿ ಕಾಯ್?” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:16
11 ತಿಳಿವುಗಳ ಹೋಲಿಕೆ  

ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.


ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,


ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?


ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?


ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,


“ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ!


ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು