ಮತ್ತಾಯ 21:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತಿರಕ್ಕೆ ತನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಲ್ಲಿ ಯೇಸು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗೆ ಇರುವ ಆ ಹಳ್ಳಿಗೆ ಹೋಗಿರಿ. ಅಲ್ಲಿ ಕಟ್ಟಿಹಾಕಿರುವ ಒಂದು ಹೇಸರಗತ್ತೆಯನ್ನೂ ಅದರ ಮರಿಯನ್ನೂ ಕಾಣುವಿರಿ. ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೇಸು ಇಬ್ಬರು ಶಿಷ್ಯರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರ ಕೂಡ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತರಕ್ಕೆ ಹಿಡುಕೊಂಡು ಬನ್ನಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮ ಎದುರಿನಲ್ಲಿ ಇರುವ ಪಟ್ಟಣದೊಳಕ್ಕೆ ಹೋಗಿ. ನೀವು ಅದನ್ನು ಪ್ರವೇಶಿಸಿದಾಗ, ಅಲ್ಲೇ ಕಟ್ಟಿರುವ ಒಂದು ಕತ್ತೆಯನ್ನು ಕಾಣುತ್ತೀರಿ. ಆ ಕತ್ತೆಯ ಜೊತೆಯಲ್ಲಿ ಒಂದು ಕತ್ತೆಮರಿಯನ್ನು ಸಹ ನೀವು ಕಾಣುವಿರಿ. ಆ ಎರಡು ಕತ್ತೆಗಳನ್ನು ಬಿಚ್ಚಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರಿಗೆ, “ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ. ತಕ್ಷಣವೇ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಿರುವುದನ್ನು ನೀವು ಕಾಣುವಿರಿ. ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 “ತುಮ್ಕಾ ಫಿಡೆ ದಿಸ್ತಲ್ಯಾ ಗಾಂವಾತ್ ಜಾವಾ ಅನಿ ಗಾಂವಾತ್ ಭುತ್ತುರ್ ಗೆಲ್ಲ್ಯಾ ತನ್ನಾಚ್ ಪೆಟ್ಯಾಚ್ಯಾ ವಾಂಗ್ಡಾ ಭಾಂದಲ್ಲೆ ಎಕ್ ಗಾಡಾವ್ ತುಮ್ಕಾ ಗಾವ್ತಾ. ತೆಂಕಾ ಸೊಡಾ ಅನಿ ಮಾಜೆಕ್ಡೆ ಘೆವ್ನ್ ಯೆವಾ. ಅಧ್ಯಾಯವನ್ನು ನೋಡಿ |