Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದಕ್ಕೆ ಅವರು ತಮ್ಮತಮ್ಮೊಳಗೇ ಹೀಗೆಂದು ತರ್ಕಮಾಡಲಾರಂಭಿಸಿದರು: “ದೇವರಿಂದ ಬಂತು ಎಂದು ಉತ್ತರಿಸಿದರೆ, ‘ಹಾಗಾದರೆ ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು. ‘ಮನುಷ್ಯರಿಂದ ಬಂತು’ ಎಂದು ಹೇಳಿದೆವಾದರೆ ಜನಸಮೂಹಕ್ಕೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೊವಾನ್ನನು ಒಬ್ಬ ಪ್ರವಾದಿಯೆಂದು ಸರ್ವರೂ ಸನ್ಮಾನಿಸುತ್ತಾರೆ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮನುಷ್ಯರಿಂದ ಬಂತೆಂದು ಹೇಳಿದರೆ ನಮಗೆ ಜನರ ಭಯವದೆ; ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸಿದ್ದಾರಲ್ಲಾ ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ‘ಅದು ಮನುಷ್ಯನಿಂದ ಬಂದಿತು’ ಎಂದರೆ ಜನರೆಲ್ಲರೂ ನಮ್ಮ ಮೇಲೆ ಕೋಪಗೊಳ್ಳುವರು. ಅವರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿ ಎಂದು ನಂಬಿರುವುದರಿಂದ ನಾವು ಅವರಿಗೆ ಹೆದರಬೇಕಾಗಿದೆ” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ‘ಮನುಷ್ಯರಿಂದ ಬಂತು,’ ಎಂದು ಹೇಳಿದರೆ ಜನರಿಗೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಗೌರವಿಸುತ್ತಾರೆ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅನಿ ಅಮಿ ಮಾನ್ಸಾಕ್ನಾ ಮನುನ್ ಸಾಂಗ್ಲಾಂವ್ ತರ್ ಲೊಕಾ ಅಮ್ಕಾ ಕಾಯ್ ಕರ್‍ತ್ಯಾತ್ ಕಾಯ್ಕಿ ಮಟ್ಲ್ಯಾನಿ ಅನಿ ತೆನಿ ಲೊಕಾಕ್ನಿ ಭಿಂಯಾಲೆ. ಕಶ್ಯಾಕ್ ಮಟ್ಲ್ಯಾರ್ ಲೊಕಾ ಜುವಾಂವ್ ಎಕ್ ಪ್ರವಾದಿ ಮನುನ್ ಮಾನಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:26
17 ತಿಳಿವುಗಳ ಹೋಲಿಕೆ  

ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.


ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.


ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.


ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.


ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.


ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.


ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.


ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.


ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,


ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.


‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.


ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.


ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು.


ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು;


ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು