Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು ಎಂದು ಕೇಳಿದ್ದಕ್ಕೆ ಅವರು - ಮೊದಲನೆಯವನೇ ಅಂದರು. ಆಗ ಯೇಸು ಅವರಿಗೆ - ಭ್ರಷ್ಟರೂ ಸೂಳೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಈ ಇಬ್ಬರು ಗಂಡುಮಕ್ಕಳಲ್ಲಿ ತಂದೆಗೆ ಯಾರು ವಿಧೇಯರಾದರು?” ಆಗ ಯೆಹೂದ್ಯ ನಾಯಕರು, “ಮೊದಲನೆಯ ಮಗ” ಎಂದು ಉತ್ತರಕೊಟ್ಟರು. ಯೇಸು ಅವರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸುಂಕವಸೂಲಿಗಾರರನ್ನು ಮತ್ತು ವೇಶ್ಯೆಯರನ್ನು ಕೆಟ್ಟಜನರೆಂದು ನೀವು ಅಂದುಕೊಂಡಿದ್ದೀರಿ. ಆದರೆ ಅವರು ನಿಮಗಿಂತ ಮುಂಚೆಯೇ ದೇವರ ರಾಜ್ಯಕ್ಕೆ ಪ್ರವೇಶಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ನಡೆದವನು?” ಎಂದು ಕೇಳಲು ಅವರು ಯೇಸುವಿಗೆ, “ಮೊದಲನೆಯವನೇ,” ಎಂದರು. ಆಗ ಯೇಸು ಅವರಿಗೆ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 “ತರ್ ಹ್ಯಾ ದೊಗ್ಯಾನಿತ್ಲ್ಯಾ ಖಲ್ಯಾ ಲೆಕಾನ್ ಬಾಬಾಕ್ ಪಾಜೆ ಹೊಲ್ಲೆ ಕಾಮ್ ಕರ್‍ಲ್ಯಾನ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ,“ಪಯ್ಲೆಚ್ಯಾ ಲೆಕಾನ್.” ಮನುನ್ ಜಬಾಬ್ ದಿಲ್ಯಾನಿ. ತೆಚೆಸಾಟ್ನಿ ಜೆಜುನ್ ತೆಂಕಾ,“ಮಿಯಾ ತುಮ್ಕಾ ಸಾಂಗ್ತಾ, ತೆರ್‍ಗಿ ವಸುಲ್ ಕರ್‍ತಲೆ ಅನಿ ವೈಬಿಚಾರ್ ಕರ್‍ತಲಿ ಲೊಕಾ ತುಮ್ಚ್ಯೆನ್ಕಿ ಅದ್ದಿ ದೆವಾಚ್ಯಾ ರಾಜಾತ್‍ ಜಾವ್ನ್ ಪಾವ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:31
26 ತಿಳಿವುಗಳ ಹೋಲಿಕೆ  

ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು.


“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.


ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


ಹೀಗೆ ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು.


ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.


ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?


ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.


ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.


ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.


ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಮಾತುಗಳು ಕೂಡ ನಿನಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ, ನಿನ್ನನ್ನು ಅಪರಾಧಿಯನ್ನಾಗಿಸುತ್ತದೆ.


“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.


ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.


ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.


ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು