ಮತ್ತಾಯ 21:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 “ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಅವರು ಆತನಿಗೆ - ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ಕಾಲಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ಒಕ್ಕಲಿಗರಿಗೆ ತನ್ನ ತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಯೆಹೂದ್ಯ ಯಾಜಕರು ಮತ್ತು ನಾಯಕರು, “ಅವನು ಖಂಡಿತವಾಗಿ ಆ ದುಷ್ಟಜನರನ್ನು ಕೊಂದು ಸುಗ್ಗಿಕಾಲದಲ್ಲಿ ತನ್ನ ಪಾಲನ್ನು ತನಗೆ ಕೊಡುವ ರೈತರಿಗೆ ಅದನ್ನು ಗುತ್ತಿಗೆಗೆ ಕೊಡುತ್ತಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿಗೆ, “ಅವನು ಆ ದುಷ್ಟ ಮನುಷ್ಯರನ್ನು ಕ್ರೂರವಾಗಿ ಸಂಹರಿಸುವನು. ತಕ್ಕ ಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಗೇಣಿಗೆದಾರರಿಗೆ ತನ್ನ ದ್ರಾಕ್ಷಿತೋಟವನ್ನು ಗೇಣಿಗೆ ಕೊಡುವನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ತನ್ನಾ ತೆನಿ, “ತೊ ಯೆವ್ನ್ ತ್ಯಾ ಬುರ್ಶ್ಯಾ ಗುತ್ಕೆ ಧರಲ್ಲ್ಯಾಕ್ನಿ ಖರೆಚ್ ಜಿವಾನಿ ಮಾರ್‍ತಾ ಅನಿ ಅಪ್ನಾಚೆ ಶೆತ್ ಸುಗ್ಗಿಕ್ ಅಪ್ನಾಚೊ ವಾಟೊ ದಿತಲ್ಯಾ ದುಸ್ರ್ಯಾ ಗುತ್ಕೆ ಧರ್‍ತಲ್ಯಾಕ್ನಿ ಗುತ್ಕ್ಯಾಕ್ ದಿತಾ.” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |