Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಅಷ್ಟೇ ಅಲ್ಲದೆ, ಆ ಕಲ್ಲಿನ ಮೇಲೆ ಬೀಳುವವನು ಛಿದ್ರಛಿದ್ರನಾಗುವನು. ಯಾವನ ಮೇಲೆ ಆ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅವನನ್ನು ಪುಡಿಪುಡಿಮಾಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಈ ಕಲ್ಲಿನ ಮೇಲೆ ಬೀಳುವ ಮನುಷ್ಯನು ತುಂಡುತುಂಡಾಗುತ್ತಾನೆ. ಈ ಕಲ್ಲು ಮನುಷ್ಯನ ಮೇಲೆ ಬಿದ್ದರೆ, ಅವನು ಜಜ್ಜಿಹೋಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು, ಆದರೆ ಇದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಹ್ಯಾ ಗುಂಡ್ಯಾ ವರ್‍ತಿ ಜೊ ಕೊನ್ ಪಡ್ತಾ. ತೊ ತುಕ್ಡೆ-ತುಕ್ಡೆ ಹೊತಾ, ಅನಿ ಹ್ಯೊ ಗುಂಡೊಚ್ ಕೊನಾ ವರ್‍ತಿ ತರ್ ಪಡ್ಲ್ಯಾರ್ ತೊ ಬುಕ್ನಾಚ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:44
22 ತಿಳಿವುಗಳ ಹೋಲಿಕೆ  

ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.


ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.


“ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು.


ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.


ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.


ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.”


ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.


ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.


ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.


ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.


ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು