Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಚೀಯೋನ್ ನಗರಿಗೆ - ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು ಹೇಳಿರಿ ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಸೀಯೋನ್ ನಗರಿಗೆ ಹೇಳಿರಿ, ‘ನಿನ್ನ ರಾಜನು ಈಗ ನಿನ್ನ ಬಳಿಗೆ ಬರುತ್ತಿದ್ದಾನೆ. ದೀನತೆಯಿಂದ ಕತ್ತೆಯ ಮೇಲೆ ಬರುತ್ತಿದ್ದಾನೆ. ಹೌದು, ಪ್ರಾಯದ ಕತ್ತೆಮರಿಯ ಮೇಲೆ ಬರುತ್ತಿದ್ದಾನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಚೀಯೋನಿನ ಪುತ್ರಿಗೆ ಹೇಳಿರಿ, ‘ಇಗೋ, ನಿನ್ನ ಅರಸನು, ಸಾತ್ವಿಕನಾಗಿ, ಕತ್ತೆಯನ್ನೂ, ಕತ್ತೆಯಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 “ಅಬಕ್, ತುಜೊ ರಾಜಾ ತುಜ್ಯಾ ಭುತ್ತುರ್ ಯೆವ್ಲಾ ತೊ ಖಾಯ್ಲ್ ಹೊವ್ನ್ ಚಲ್ತಲೊ, ಅನಿ ಗಾಡ್ವಾಚ್ಯಾ ಪೆಟ್ಯಾ ವರ್‍ತಿ ಬಸುನ್ ತೊ ಯೆತಾ. ಮನುನ್ ಸಿಯೊನ್ ಶಾರಾಕ್ ಸಾಂಗ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:5
39 ತಿಳಿವುಗಳ ಹೋಲಿಕೆ  

“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.


ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!


“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಅರಸನಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.


ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.


“‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.


“ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,


ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.


ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು.


ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.


ಅರಸನು ಚೀಬನನ್ನು, “ಇವುಗಳನ್ನು ಯಾಕೆ ತಂದಿ?” ಎಂದು ಕೇಳಿದನು. ಅವನು, “ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಆಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲಿ ದಣಿದವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ” ಎಂದು ಉತ್ತರಕೊಟ್ಟನು.


ಇವನಿಗೆ ನಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರನ್ನು ಎಂಟು ವರ್ಷಗಳ ಕಾಲ ಪಾಲಿಸಿದ ನಂತರ ಮರಣಹೊಂದಿದನು;


“ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತುಕೊಳ್ಳುವವರೇ, ಕಾಲ್ನಡಿಗೆಯಲ್ಲಿ ಪ್ರಯಾಣಿಸುವವರೇ, ಗಾನಮಾಡಿರಿ.


ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.


ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು, ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು” ಎಂದನು.


ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು