Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ ಅವರು ಹೋಗಿ ಯೋಗ್ಯರು, ಅಯೋಗ್ಯರೆನ್ನದೆ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುತಂದರು. ವಿವಾಹ ಮಂಟಪ ಅತಿಥಿಗಳಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಆಳುಗಳು ಹಾದಿಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರು ಅನ್ನದೆ ಕಂಡವರನ್ನೆಲ್ಲಾ ಕೂಡಿಸಿ ಕರಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಂತೆಯೇ ಸೇವಕರು ಬೀದಿಬೀದಿಗಳಿಗೆ ಹೋಗಿ ತಾವು ಕಂಡ ಜನರನ್ನೆಲ್ಲಾ ಒಳ್ಳೆಯವರು, ಕೆಟ್ಟವರು ಎನ್ನದೆ ಒಟ್ಟುಗೂಡಿಸಿ ಊಟ ಸಿದ್ಧವಾಗಿದ್ದ ಸ್ಥಳಕ್ಕೆ ಕರೆತಂದರು. ಆ ಸ್ಥಳವು ಜನರಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಆ ಸೇವಕರು ಮುಖ್ಯ ಬೀದಿಗಳಿಗೆ ಹೋಗಿ ತಾವು ಕಂಡ ಕೆಟ್ಟವರನ್ನೂ ಒಳ್ಳೆಯವರನ್ನೂ ಕರೆತಂದರು. ಹೀಗೆ ಮದುವೆ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಶೆ ಆಳಾ ವನಿಯಾತ್ನಿ ಗೆಲಿ, ಅನಿ ಬರ್‍ಯಾಕ್ನಿ, ಬುರ್ಶ್ಯಾಕ್ನಿ ಮನಿನಸ್ತಾನಾ ಗಾವ-ಗಾವಲ್ಲ್ಯಾ ಸಗ್ಳ್ಯಾ ಲೊಕಾಕ್ನಿ ಗೊಳಾ ಕರುನ್ ಬಲ್ವುನ್ ಹಾನ್ಲ್ಯಾನಿ. ಅಶೆ ಲಗ್ನಾಚೊ ಮಾಟವ್ ಲೊಕಾನಿ ಭರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:10
15 ತಿಳಿವುಗಳ ಹೋಲಿಕೆ  

ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.


ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.


ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ ರಾಜ್ಯದ ಮಕ್ಕಳು.


“ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ


ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು