Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ಏನಯ್ಯ, ಸಮಾರಂಭಕ್ಕೆ ತಕ್ಕ ಉಡುಪಿಲ್ಲದೆ ಒಳಗೆ ಹೇಗೆ ಬಂದೆ?’ ಎಂದು ಅವನನ್ನು ಕೇಳಿದ. ಅದಕ್ಕೆ ಅವನು ಮೌನತಳೆದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನನ್ನು - ಏನಪ್ಪಾ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ‘ಸ್ನೇಹಿತನೇ, ನೀನು ಒಳಗೆ ಹೇಗೆ ಬಂದೆ? ನೀನು ಮದುವೆಗೆ ಯೋಗ್ಯವಾದ ಬಟ್ಟೆಯನ್ನು ಧರಿಸಿಕೊಂಡಿಲ್ಲವಲ್ಲಾ’ ಅಂದನು. ಆದರೆ ಅವನು ಉತ್ತರ ನೀಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅರಸನು ಆ ಮನುಷ್ಯನಿಗೆ, ‘ಸ್ನೇಹಿತನೇ, ಮದುವೆಯ ವಸ್ತ್ರವಿಲ್ಲದೆ ನೀನು ಒಳಗೆ ಹೇಗೆ ಬಂದೆ?’ ಎಂದು ಕೇಳಲು ಅವನು ಸುಮ್ಮನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ರಾಜಾನ್ ತೆಕಾ “ದೊಸ್ತಾ, ಲಗ್ನಾಕ್ ನೆಸ್ತಲೆ ಕಪ್ಡೆ ನೆಸಿನಸ್ತಾನಾ ತಿಯಾ ಹಿತ್ತೆ ಕಸೊ ಭುತ್ತುರ್ ಯೆಲೆ?” ಮನುನ್ ಇಚಾರ್‍ಲ್ಯಾನ್. ಖರೆ ತ್ಯಾ ಮಾನ್ಸಾನ್ ತೆಕಾ ಕಾಯ್ಬಿ ಸಾಂಗುಕ್‍ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:12
13 ತಿಳಿವುಗಳ ಹೋಲಿಕೆ  

ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?


ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವುದು, ಅನ್ಯಾಯವು ಬಾಯಿ ಮುಚ್ಚಿಕೊಳ್ಳುವುದು.


“ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.


ಅಂಥವನು ಸನ್ಮಾರ್ಗದಿಂದ ದೂರವಾದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷೆಗೆ ಅರ್ಹನೆಂದು ಅವನ ಮನಸ್ಸೇ ನಿರ್ಣಯ ಮಾಡುತ್ತದೆ.


ಯೇಸು ಅವನಿಗೆ, “ಗೆಳೆಯನೇ, ನೀನು ಯಾಕೆ ಬಂದಿರುವೇ” ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.


ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.


“ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.


ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು